ದಾವಣಗೆರೆ: ಮಾಜಿ ಸಚಿವ, ಶಾಸಕ ಎಸ್.ಎ.ರವೀಂದ್ರನಾಥ್ ಅವರು 75 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನ. 26 ರಂದು ಎಸ್.ಎ.ರವೀಂದ್ರನಾಥ್ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅಭಿನಂದನಾ ಸಮಿತಿಯ ಸಂಗನಗೌಡ್ರು ಮಾತನಾಡಿ, ಎಸ್.ಎ.ರವೀಂದ್ರನಾಥ್ ಅಮೃತ ಮಹೋತ್ಸವ ಅಭಿನಂದನಾ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಿದ್ದು, ನ.26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಅಭಿನಂದನಾ ಸಮಾರಂಭ ಮತ್ತು ಎಸ್.ಎ.ಆರ್. ಕುರಿತು ಕೃಷಿ ಕಣ್ಮಣಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಕೃಷಿ ಕಣ್ಮಣಿ ಅಭಿನಂದನಾ ಪುಸ್ತಕವನ್ನು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡುವರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ್ ಗೌರವ ಸಮರ್ಪಿಸಲಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ ಅಭಿನಂದನಾ ನುಡಿಗಳನ್ನಾಡಲಿದ್ದಾರೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ವಾಲ್ಮೀಕಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರಪ್ಪ, ಸೋಪು ಮತ್ತು ಮಾರ್ಜಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಡಳು ವಿರೂಪಾಕ್ಷಪ್ಪ, ಲಿಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ.ಎನ್.ಲಿಂಗಣ್ಣ, ಶಾಸಕ ಜಿ.ಕರುಣಾಕರ ರೆಡ್ಡಿ, ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ವಿಧಾನ ಪರಿಷತ್ ಸದದಸ್ಯ ಎನ್.ರವಿಕುಮಾರ್, ರಾಜ್ಯ ಮಹಿಳಾ ಬಿಜೆಪಿ ಕಾರ್ಯದರ್ಶಿ ಸುಧಾ ಜಯರುದ್ರೇಶ್, ಮೇಯರ್ ಎಸ್.ಟಿ.ವೀರೇಶ್, ದೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್, ಮುಖಂಡರಾದ ಅಣಬೇರು ಜೀವನಮೂರ್ತಿ, ಎಸ್.ಎಂ.ವೀರೇಶ್ ಹನಗವಾಡಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪಾಲಿಕೆ ಮಹಾಪೌರ ಎಸ್.ಟಿ.ವೀರೇಶ್ ಮಾತನಾಡಿ, ಶಾಸಕ ಎಸ್.ಎ.ರವೀಂದ್ರನಾಥ್ ಅವರ ಅಮೃತ ಮಹೋತ್ಸವ ಹಿನ್ನೆಲೆ ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು ಸೇರಿಕೊಂಡು ವೈಯಕ್ತಿಕ ದೇಣಿಗೆ ಹಾಕಿಕೊಂಡು ಯಾವುದಾರರೊಂದು ಸರ್ಕಾರಿ ಶಾಲೆಗೆ ಒಂದು ಸುಸಜ್ಜಿತ ಕೊಠಡಿ ನಿರ್ಮಿಸಿಕೊಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು. ಈ ಸಂದರ್ ಭದಲ್ಲಿ ಪಾಲಿಕೆ ಸದಸ್ಯ ಪ್ರಸನ್ನಕುಮಾರ್, ಬಿಜೆಪಿ ಮುಖಂಡರಾದ ಶಿವರಾಜ ಪಾಟೀಲ್, ಎನ್.ಕೆ.ಹನುಮಂತಪ್ಪ, ಬಸವರಾಜಯ್ಯ, ರಾಜು ಶಾಮನೂರು ಹಾಜರಿದ್ದರು.