ದಾವಣಗೆರೆ: 2021-22ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಡಿ.14 ರಂದು ಸರ್ಕಾರಿ ನೌಕರರ ಭವನ ನಡೆಯಲಿದೆ.
ಈ ಯುವಜನೋತ್ಸವ ಆಯ್ಕೆ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಈ ಕೆಳಕಂಡ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, 15 ರಿಂದ 29 ವರ್ಷ ವಯೋಮಾನದೊಳಗಿನ ಎಲ್ಲಾ ಯುವ ಜನರು ಭಾಗವಹಿಸಬಹುದು. ಸ್ಪರ್ಧೆಯಲ್ಲಿ ಭಾಗವಹಿಸುವರು ಎಸ್.ಎಸ್.ಎಲ್.ಸಿ ಅಂಕಪಟ್ಟಿ ನಕಲು ಅಥವಾ ಆಧಾರ್ ಮೂಲಪ್ರತಿಯನ್ನು ಹಾಗೂ ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಇಲ್ಲದೇ ಇದ್ದ ಪಕ್ಷದಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ. ಯುವಜನೋತ್ಸವ ಕಾರ್ಯಕ್ರಮದಲ್ಲಿ ಗುಂಪು ಸ್ಪರ್ಧೆಗಳ ವಿಭಾಗದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ವೈಯಕ್ತಿಕ ಸ್ಪರ್ಧೆಗಳ ವಿಭಾಗದಲ್ಲಿ ಕನ್ನಡ, ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಏಕಪಾತ್ರಾಭಿನಯ ಮತ್ತು ಅಸುಭಾಷಣ, ಶಾಸ್ತ್ರೀಯ ಸಂಗೀತದಲ್ಲಿ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಶಾಸ್ತ್ರೀಯ ನೃತ್ಯಗಳಲ್ಲಿ ಭಾರತನಾಟ್ಯ, ಒಡಿಸ್ಸಿ, ಮಣಿಪುರಿ, ಕುಚುಪುಡಿ, ಕಥಕ್, ಕಥಕಳಿ, ಶಾಸ್ತ್ರೀಯ ವಾಧ್ಯಗಳಲ್ಲಿ ಸಿತಾರ, ಕೊಳಲು, ತಬಲಾ, ವೀಣಾ, ಮೃದಂಗಂ ಹಾಗೂ ಹಾರೋನಿಯಂ, ಗಿಟಾರ್ ಸ್ಪರ್ಧೆಗಳು ನಡೆಸಲಾಗುವುದು.
ಸ್ಪರ್ಧೆಗೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಮಧ್ಯಾಹ್ನದ ಉಪಹಾರ ಹಾಗೂ ದಾವಣಗೆರೆ ಹೊರತುಪಡಿಸಿ ಹೊರತಾಲ್ಲೂಕಿನವರಿಗೆ ಸಾಮಾನ್ಯ ಪ್ರಯಾಣ ಭತ್ಯೆ ನೀಡಲಾಗುವುದು. ಆಯ್ಕೆಯಾದವರು ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಹೆಚ್ಚಿನಮಾಹಿತಿಗಾಗಿ ಸ್ಪರ್ಧಾಳುಗಳು ಡಿ.14 ರಂದು ಸರ್ಕಾರಿ ನೌಕರರ ಸಭಾಭವನ, ನಿಜಲಿಂಗಪ್ಪ ಬಡಾವಣೆ ದಾವಣಗೆರೆ ಇಲ್ಲಿ ಬೆಳಿಗ್ಗೆ 9 ಗಂಟೆಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದು. ದೂ.ಸಂ: 08192-237480ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



