Connect with us

Dvgsuddi Kannada | online news portal | Kannada news online

ದಾವಣಗೆರೆ: ಭತ್ತ ಕಟಾವು ಯಂತ್ರಗಳಿಗೆ ದರ ನಿಗದಿಪಡಿಸಿದ ಡಿಸಿ

paddy33

ದಾವಣಗೆರೆ

ದಾವಣಗೆರೆ: ಭತ್ತ ಕಟಾವು ಯಂತ್ರಗಳಿಗೆ ದರ ನಿಗದಿಪಡಿಸಿದ ಡಿಸಿ

ದಾವಣಗೆರೆ: ಖಾಸಗಿ ಭತ್ತ ಕಟಾವು ಯಂತ್ರಗಳಿಗೆ ಪ್ರತಿ ಘಂಟೆಗೆ ಬೆಲ್ಟ್ ಅಥವಾ ಚೈನ್ ಟೈಪ್ ಯಂತ್ರಗಳಿಗೆ ರೂ.2250 ಹಾಗೂ ಟೈರ್ ಟೈಪ್ ಭತ್ತ ಕಟಾವು ಯಂತ್ರಗಳಿಗೆ ರೂ.1800 ದರ ನಿಗದಿಪಡಿಸಲಾಗಿದೆ. ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 66245 ಹೆಕ್ಟೇರು ಪ್ರದೇಶದಲ್ಲಿ ಭತ್ತದ ಬೆಳೆ ಕ್ಷೇತ್ರ ಆವರಿಸಿದ್ದು ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬಲಿಯುವ ಹಂತದಿಂದ ಕಟಾವಿನ ಹಂತ ತಲುಪಿದ್ದು ಅಲ್ಲಲ್ಲಿ ಕಟಾವು ಆರಂಭವಾಗಿದೆ.ರೈತರು ಭತ್ತದ ಬೆಳೆಯನ್ನು ಯಂತ್ರಗಳ (Combined Harvesters) ಮೂಲಕ ಕಟಾವು ಮಾಡುತ್ತಿದ್ದು ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕಟಾವು ಯಂತ್ರಗಳ ಪ್ರಯೋಜನ ಪಡೆಯಬಹುದು.

ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ಪ್ರತಿ ಘಂಟೆಗೆ 2800 ರಿಂದ 3800ರೂಗಳವರೆಗೆ ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಗಮನಕ್ಕೆ ಬಂದಿದ್ದು ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆ ಆಗಲಿದೆ. ಆದ್ದರಿಂದ ಪರಿಷ್ಕøತ ನಿಗದಿಪಡಿಸಿರುವ ದರವನ್ನು ಬಾಡಿಗೆ ಭತ್ತ ಕಟಾವು ಯಂತ್ರಗಳ ಮಾಲೀಕರು ಪಡೆಯಬೇಕು. ತಪ್ಪಿದಲ್ಲಿ ಅಂತಹ ಮಾಲೀಕರುಗಳ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಹೆಚ್ಚು ಹಣಕ್ಕೆ ಒತ್ತಾಯಿಸಿದರೆ ರೈತರು ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top