Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.31 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿತ್ತು. ಇದೀಗ ಅವಧಿಯನ್ನು ಡಿ. 31 ರವರೆಗೆ ವಿಸ್ತರಿಸಲಾಗಿದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವೆಬ್‍ಸೈಟ್ ವಿಳಾಸ https://ssp.postmatric.karnataka.gov.in, ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‍ಸೈಟ್ ವಿಳಾಸ www.bcwd.karnataka.gov.in/ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ & ಇಮೇಲ್ 8050770005/ 805077000 bcwd.scholarship@karnataka.gov.in ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in ಮೊ.ಸಂ: 080-35254757 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top