ದಾವಣಗೆರೆ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ವಿಜ್ಞಾನಿ ಪ್ರಶಸ್ತಿಗೆ 9 ರಿಂದ 12ನೇತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಡಿ.08ರೊಳಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ, ಅಂಬೇಡ್ಕರ್ ವೃತ್ತ ದಾವಣಗೆರೆ ಇಲ್ಲಿಗೆ ಸಲ್ಲಿಸಲು ಕೋರಿದೆ. ಹಾಗೂ ಅರ್ಜಿ ಪ್ರತಿಯನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಬೆಂಗಳೂರು ಇವರಿಗೆ ಸಲ್ಲಿಸಬೇಕು. ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಡಿ.14 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಲಾಗುವುದು.ಭಾಗವಹಿಸುವ ವಿದ್ಯಾರ್ಥಿಗಳು ಸ್ಪರ್ಧೆಯ ದಿನದಂದು ವಿಜ್ಞಾನ ಅಥವಾ ಗಣಿತ ವಿಷಯದಲ್ಲಿ ಸ್ವಂತ ವೈಜ್ಞಾನಿಕ ವಿಶ್ಲೇಷಣೆ ಅಥವಾ ಅವಲೋಕನದಿಂದ ಕೂಡಿದ ಅಧ್ಯಯನ ಕೈಗೊಂಡು ಸಂಶೋಧಿಸಿದ ಯೋಜನೆ/ಮಾದರಿಯನ್ನು ಮಂಡಿಸಬೇಕು.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 5 ಸಾವಿರ, ದ್ವಿತೀಯ ಬಹುಮಾನಕ್ಕೆ 3 ಸಾವಿರ ರಾಜ್ಯಮಟ್ಟದಲ್ಲಿ 4 ಯುವ ವಿಜ್ಞಾನಿಗಳಿಗೆ ತಲಾ 10 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ವಿಜ್ಞಾನ ವಿಷಯದ ಪರಿವೀಕ್ಷಕರಾದ ಆರ್.ಬಿ ವಸಂತಕುಮಾರಿ ಮೊ.ಸಂ: 9481867596, ಜಿಲ್ಲಾ ಸಂಯೋಜಕರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಿದ್ದಪ್ಪ ಭೀ ಕಕ್ಕಳಮೇಲಿ ಮೊ.ಸಂ: 7019715190 ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಎಂ ಗುರುಸಿದ್ದಸ್ವಾಮಿ ಮೊ.ಸಂ: 9880531823 ನ್ನು ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



