Connect with us

Dvgsuddi Kannada | online news portal | Kannada news online

ಕುರಿ, ಮೇಕೆ ಸಾಕಾಣಿಕೆ ಉಚಿತ ತರಬೇತಿ

ದಾವಣಗೆರೆ

ಕುರಿ, ಮೇಕೆ ಸಾಕಾಣಿಕೆ ಉಚಿತ ತರಬೇತಿ

ಡಿವಿಜಿ ಸುದ್ದಿ, ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕುರಿ ಮತ್ತು ಮೇಕೆ ಸಾಕಾಣಿಕೆಯ ಉಚಿತ ತರಬೇತಿ ಕಾರ್ಯಕ್ರಮವನ್ನು ನ.18 ರಿಂದ 20 ರವರೆಗೆ ಆಯೋಜಿಸಿದೆ.  ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 3 ದಿನಗಳ ಕಾಲ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಆಸಕ್ತ ರೈತರು, ಮಹಿಳೆಯರು, ನಿರುದ್ಯೋಗ ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು. ತರಬೇತಿ ಅವಧಿಯಲ್ಲಿ ಯಾವುದೇ ಊಟ, ವಸತಿ ಸೌಕರ್ಯದ ವ್ಯವಸ್ಥೆ ಇರುವುದಿಲ್ಲ. ತರಬೇತಿ ಪಡೆಯಲು 35 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್, 2 ಭಾವಚಿತ್ರಗಳು ಹಾಗೂ ಪ.ಜಾತಿ/ಪ.ಪಂಗಡದವರು ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ತರಬೇಕು.ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ, ದಾವಣಗೆರೆ ದೂ.ಸಂ: 08192-233787 ನ್ನು ಸಂಪರ್ಕಿಸಬಹುದೆಂದು ಪಶುವೈದ್ಯಕೀಯ ಸಹಾಯಕ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top