ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗೆ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನಗಳನ್ನು ತುಂಬಲು ಡಿ.27 ರಂದು ಮತದಾನ ನಡೆಯಲಿದೆ. ದಾವಣಗೆರೆ ತಾಲ್ಲೂಕು ಗ್ರಾಮ ಪಂಚಾಯಿತಿ ಸಂಖ್ಯೆ 12-ದೊಡ್ಡಬಾತಿ, 42-ಮಾಯಕೊಂಡ, ಚನ್ನಗಿರಿ ತಾಲ್ಲೂಕು ಗ್ರಾಮ ಪಂಚಾಯಿತಿ ಸಂಖ್ಯೆ 15-ತಣಿಗೆರೆ, 21-ಕರೇಕಟ್ಟೆ, 40-ಅಗರಬನ್ನಿಹಟ್ಟಿ ಹಾಗೂ ನ್ಯಾಮತಿ ತಾಲ್ಲೂಕು ಗ್ರಾಮ ಪಂಚಾಯಿತಿ ಸಂಖ್ಯೆ 10-ವಡೇರಹತ್ತೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಡಿ.25ರ ಸಂಜೆ 5 ಗಂಟೆಯಿಂದ ಡಿ.27 ರ ಸಂಜೆ 6 ಗಂಟೆಯವರೆಗೆ ಶುಷ್ಕ ದಿವಸವೆಂದು ಘೋಷಿಸಲಾಗಿದೆ.
ಈ ಅವಧಿಯಲ್ಲಿ ಎಲ್ಲಾ ಮದ್ಯ ಅಂಗಡಿಗಳನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚುವಂತೆ ಆದೇಶಿಸಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡು ಬಂದರೆ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣೆ ಮುಕ್ತಾಯಾಗುವವರೆಗೆ ಅಂತಹವರನ್ನು ಕಸ್ಟಡಿಯಲ್ಲಿ ಇಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶದಲ್ಲಿ ತಿಳಿಸಿದ್ದಾರೆ.