ದಾವಣಗೆರೆ: ಸಾಧು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ, ರಾಜ್ಯಸಭೆ ಮಾಜಿ ಸದಸ್ಯ ಕೆ.ಆರ್.ಜಯದೇವಪ್ಪ ಅವರು ಇಂದು (ಡಿ.23) ನಿಧನ ಹೊಂದಿದ್ದಾರೆ. ಇವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಇವರನ್ನು ಇತ್ತೀಚಿಗೆ ದಾವಣಗೆರೆ ನಗರದ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು. ವಿದ್ಯಾ ನಗರದ ಗಣಪತಿ ದೆವಸ್ಥಾನ ಬಳಿ ಇರುವ ಅವರ ನಿವಾಸದಲ್ಲಿ ನಾಳೆ ಮಧ್ಯಾಹ್ನ 1 ಗಂಟೆ ವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಾಳೆ ಕಂದಗಲ್‌ನ ಜಮೀನಿನಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನೆರೆವೇರಲಿದೆ.1991-1996ರ ಅವಧಿಯಲ್ಲಿ ರಾಜ್ಯಸಭೆ ಸದಸ್ಯರಾಗಿದ್ದ ಕೆ.ಆರ್.ಜಯದೇವಪ್ಪ ಅವರು ಸಾಧು ವೀರಶೈವ ಸಮಾಜದ ಅಧ್ಯಕ್ಷರೂ ಆಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಅನುಯಾಯಿಗಿದ್ದರು. ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರವಿದ್ದರು.