ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ-ಗಂಗಾನರಸಿ ಗ್ರಾಮ ಸಂಪರ್ಕಿಸುವ ಸೇತುವೆ ಹಾಗೂ ರಸ್ತೆ ಅಭಿವೃದ್ಧಿಗೆ 2.25 ಕೋಟಿ ಮೊತ್ತದ ಕಾಮಗಾರಿಗೆ ಸಂಸದ ಜಿ.ಎಂ.ಸಿದ್ದೇಶ್ವರ ಶಂಕುಸ್ಥಾಪನೆ ನೆರವೇರಿಸಿದರು.
ಕಳೆದ ಮುಂಗಾರು ಮಳೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದರಿಂದ ಕೊಂಡಜ್ಜಿ-ಗಂಗಾನರಸಿ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿತ್ತು. ಆಗ ಸ್ಥಳಕ್ಕೆ ಆಗಮಿಸಿದ್ದ ಸಂಸದ ಜಿ.ಎಂ ಸಿದ್ದೇಶ್ವರ್, ಶಾಸಕ ರಾಮಪ್ಪ ಹೊಸದಾಗಿ ಸೇತುವೆ ಹಾಗೂ ರಸ್ತೆ ಅಭಿವೃದ್ದಿಗೆ ಯೋಜಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಇದೀಗ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ಅನುದಾನ ಮುಂಜೂರಾಗಿದ್ದು, ಇಂದು (ಜ.06) ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಎಸ್.ರಾಮಪ್ಪ, ಮಾಜಿ ಶಾಸಕ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಎಂ.ವಾಗೀಶ್ ಸ್ವಾಮಿ, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.



