ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪುರಸಭೆಗೆ ಸಂಬಂಧಿಸಿದಂತೆ 2022-23 ನೇ ಸಾಲಿನ ಆಯವ್ಯಯವನ್ನು ತಯಾರಿಸುವ ಕುರಿತು ಜ.07 ರಂದು ಬೆಳಗ್ಗೆ 11 ಗಂಟೆಗೆ ಮಲೇಬೆನ್ನೂರು ಪುರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಪೂರ್ವಭಾವಿಯಾಗಿ ಸಾರ್ವಜನಿಕ ಸಮಾಲೋಚನೆ ನಡೆಸಲು ಸಭೆ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಸಕಾಲಕ್ಕೆ ಹಾಜರಾಗಿ ತಮ್ಮ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆ ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



