ದಾವಣಗೆರೆ; ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ 20 ಕೋಟಿ ವೆಚ್ಚದಲ್ಲಿ ಜಯದೇವ ಕಾರ್ಡಿಯಾಲಜಿ ಸೆಂಟರ್ ತೆರೆಯಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿದ ಅವರು, 2021-22 ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ 20 ವೆಚ್ಚದಲ್ಲಿ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ವಾವರಣದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉಪ ಕೇಂದ್ರ ತೆರೆಯಲಾಗುವುದು.ಇದಕ್ಕೆ ಈಗಾಗಲೇ ಅಗತ್ಯ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದಿದ್ದಾರೆ.
ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ.ಸಿ.ಎನ್. ಮಂಜುನಾಥ್ ಅವರಿಗೆ ಪ್ರಕ್ರಿಯೆ ಚುರುಕುಗೊಳಿಸುಂತೆ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಜಯದೇವ ಆಸ್ಪತ್ರೆ ಮುಖ್ಯಸ್ಥರು ತಂಡವೊಂದನ್ನು ಕಳಿಸುವುದಾಗಿ ತಿಳಿಸಿದ್ದು, ಕೇಂದ್ರಕ್ಕೆ ಅಗತ್ಯವಾಗ 1.28 ಎಕೆರೆ ಜಮೀನು ಹಸ್ತಾಂತರ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ ಎಂದು ಡಾ. ಮಂಜುನಾಥ್ ತಿಳಿಸಿದ್ದಾರೆ ಎಂದು ಸಂಸದರು ಹೇಳಿದ್ದಾರೆ.



