Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆ, ಸೈಟ್ ಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮನೆ, ಸೈಟ್ ಗೆ ಅರ್ಜಿ ಆಹ್ವಾನ

ದಾವಣಗೆರೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಪಂಗಡದ ಅಲೆಮಾರಿ/ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಿಂದ ವಸತಿ ನಿರ್ಮಾಣ ಮತ್ತು ನಿವೇಶನ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ಪರಿಶಿಷ್ಟ ಪಂಗಡದ ಅಲೆಮಾರಿ/ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಅಭಿವೃದ್ದಿ ಕಾರ್ಯಕ್ರಮಗಳಡಿ ಹಕ್ಕಿಪಿಕ್ಕಿ, ಹಸಲರು, ಗೊಂಡರು, ಡೊಂಗ್ರಿಗರಾಸಿಯ ಮತ್ತು ಮೇದ ಜಾತಿಯ ಅರ್ಹ ಫಲಾಪೇಕ್ಷಿಗಳು ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ-45, ಜಿಲ್ಲಾಡಳಿತ ಭವನ, ದಾವಣಗೆರೆ ಅಥವಾ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ದಾವಣಗೆರೆ, ಚನ್ನಗಿರಿ, ಜಗಳೂರು ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಹರಿಹರ ಮತ್ತು ಹೊನ್ನಾಳಿ ಇಲ್ಲಿಗೆ ಫೆ.14 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08192 263546 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top