Connect with us

Dvgsuddi Kannada | online news portal | Kannada news online

ಸಾವಯವ ಸಿರಿ ಯೋಜನೆ; ಸಾಮಾಜಿಕ ಸಂಸ್ಥೆಗಳ ಆಯ್ಕೆಗೆ ಅರ್ಜಿ ಆಹ್ವಾನ

ದಾವಣಗೆರೆ

ಸಾವಯವ ಸಿರಿ ಯೋಜನೆ; ಸಾಮಾಜಿಕ ಸಂಸ್ಥೆಗಳ ಆಯ್ಕೆಗೆ ಅರ್ಜಿ ಆಹ್ವಾನ

ದಾವಣಗೆರೆ: ಕೃಷಿ ಇಲಾಖೆಯ ಸಾವಯವ ಸಿರಿ ಯೋಜನೆಯನ್ನು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಮಾಡಲು ಸಾವಯವ ಕೃಷಿಯ ಉತ್ತೇಜನದಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ನೋಂದಾಯಿತ ಸಾಮಾಜಿಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.

ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸಿ, ಸಾವಯವ ಉತ್ಪನ್ನಗಳು ಹಾಗೂ ಸಿರಿಧಾನ್ಯಗಳನ್ನು ವೈಜ್ಞಾನಿಕವಾಗಿ ಮಾರಾಟ ಮಾಡುವುದರ ಮೂಲಕ ರೈತರಿಗೆ ಗರಿಷ್ಠ ಬೆಲೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು “ಸಾವಯವ ಸಿರಿ” ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ಕೃಷಿ ಇಲಾಖೆಯ ಸಹಯೋಗದೊಂದಿಗೆ ಯೋಜನೆ ಅನುಷ್ಠಾನ ಮಾಡಲು ರಾಜ್ಯದಲ್ಲಿ ಸಾವಯವ ಕೃಷಿಯ ಉತ್ತೇಜನದಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ನೋಂದಾಯಿತ ಸಾಮಾಜಿಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಲಭ್ಯವಿರುತ್ತದೆ. ಆಸಕ್ತಿ ಇರುವ ಸಾಮಾಜಿಕ ಸಂಸ್ಥೆಗಳು ಅರ್ಜಿ ಅಥವಾ ಪ್ರಸ್ತಾವನೆಗಳನ್ನು ಫೆ.24 ರೊಳಗಾಗಿ ದಾವಣಗೆರೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು (ವಿಷಯ ತಜ್ಞರು) (ಮೊ.ಸಂ: 8277931105) ರನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top