ದಾವಣಗೆರೆ: ಕಂದಾಯ ಸಚಿವ ಆರ್. ಅಶೋಕ ಫೆಬ್ರವರಿ 28 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳ್ಳಿಗ್ಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಹೊನ್ನಾಳಿಗೆ ಆಗಮಿಸಿ ನಂತರ ಹೊನ್ನಾಳಿ ನೂತನ ಕಂದಾಯ ಉಪವಿಭಾಗದ ಉಪವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 2 ಗಂಟೆಗೆ ಹೊನ್ನಾಳಿಯ ಕುಂಚಿಟಿಗ ಸಮುದಾಯ ಭವನದ ಭೂಮಿ ಪೂಜೆಯನ್ನು ನೆರೆವೇರಿಸುವರು. ನಂತರ 3 ಗಂಟೆಗೆ ಹೊನ್ನಾಳಿಯಿಂದ ಹೊರಟು ಬೆಂಗಳೂರಿಗೆ ತೆರುಳುವರೆಂದು ಸಚಿವರ ಅಪ್ತ ಕಾರ್ಯದರ್ಶಿ ಡಾ.ಆರ್ ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.