ಬೆಂಗಳೂರು: ಶಿವಮೊಗ್ಗ-ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟ (ಶಿಮುಲ್) ವ್ಯಾಪ್ತಿಯಿಂದ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳನ್ನು ಬೇರ್ಪಡಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಮನವಿ ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಸಂಸದರು, ಹೊಸದಾಗಿ ಶಿವಮೊಗ್ಗ ಹಾಲು ಒಕ್ಕೂಟವನ್ನು ಪ್ರತ್ಯೇಕವಾಗಿ ಘೋಷಿಸಬೇಕು. ಶಿಮುಲ್ ಹಾಲಿನ ಪುಡಿ ತಯಾರಿಕಾ ಘಟಕವನ್ನು ಪ್ರಾರಂಭಿಸಲು ಬಜೆಟ್‌ನಲ್ಲಿ 50 ಕೋಟಿ ಅನುದಾನ ಮೀಸಲಿಡಬೇಕು ಎಂದು ತಿಳಿಸಿದ್ದಾರೆ.