Connect with us

Dvgsuddi Kannada | online news portal | Kannada news online

ದಾವಣಗೆರೆ: ಹಿಜಾಬ್ ಪ್ರಕರಣ ಪರ, ವಿರೋಧ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಹಾಕುವಂತಿಲ್ಲ; ಜಿಲ್ಲಾ ಪೊಲೀಸ್

ದಾವಣಗೆರೆ

ದಾವಣಗೆರೆ: ಹಿಜಾಬ್ ಪ್ರಕರಣ ಪರ, ವಿರೋಧ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಹಾಕುವಂತಿಲ್ಲ; ಜಿಲ್ಲಾ ಪೊಲೀಸ್

  ದಾವಣಗೆರೆ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಇಂದು ಹೈಕೋರ್ಟ್​ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು  ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದಿರುವ ಹೈಕೋರ್ಟ್​, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಬಗ್ಗೆ ಹೈಕೋರ್ಟ್ ತೀರ್ಪಿನ ಪರವಾಗಲಿ, ವಿರೋಧವಾಗಲಿ  ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಇತರೆಡೆ ಯಾವುದೇ ರೀತಿಯ ಪೋಸ್ಟ್, ಸ್ಟೇಟಸ್ ಅಥವಾ ಪ್ರಛೋದನಕಾರಿ ಹೇಳಿಕೆ , ಮೆರವಣಿಗೆ, ವಿಜಯೋತ್ಸವ ಹಾಗೂ ಪ್ರತಿಭಟನೆ ಮಾಡುವಂತಿಲ್ಲ. ಕಲಂ 144 ಸಿಆರ್ ಪಿಸಿ  ನಿಷೇಧ ಹೇರಲಾಗಿದ್ದು, ಗುಂಪುಗಾರಿಕೆ, ಗಲಾಟೆ, ದೊಂಬಿ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮಾಹಿತಿ ಇದ್ದಲ್ಲಿ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು ಎಂದು ಜಿಲ್ಲಾ ಪೊಲೀಸ್ ತಿಳಿಸಿದೆ.

ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಸರ್ಕಾರದ ಸಮವಸ್ತ್ರ ಸಂಹಿತೆ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್​ ಹೇಳಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top