Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ.29 ರಂದು ಜಪ್ತಿ ಮಾಡಿದ ಪಡಿತರ ಅಕ್ಕಿ, ರಾಗಿ ಬಹಿರಂಗ ಹರಾಜು

ದಾವಣಗೆರೆ

ದಾವಣಗೆರೆ: ಮಾ.29 ರಂದು ಜಪ್ತಿ ಮಾಡಿದ ಪಡಿತರ ಅಕ್ಕಿ, ರಾಗಿ ಬಹಿರಂಗ ಹರಾಜು

ದಾವಣಗೆರೆ: ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಅಕ್ರಮವಾಗಿ ಸಂಗ್ರಹಿಸಿಟ್ಟ ಪಡಿತರ ಅಕ್ಕಿ ಹಾಗೂ ರಾಗಿಯನ್ನ ಜಪ್ತಿ ಮಾಡಿದ್ದು, ಮಾ.29 ರಂದು ದಾವಣಗೆರೆಯ ಎಪಿಎಂಸಿ ಆವರಣದಲ್ಲಿನ ಕೆಎಸ್‍ಸಿಎಫ್‍ಸಿ ಸಗಟು ಮಳಿಗೆ 1 ರಲ್ಲಿ ಬಹಿರಂಗ ಹರಾಜು ಮಾಡಲಾಗುತ್ತಿದೆ. ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

ಜಪ್ತಿ ಮಾಡಿಕೊಳ್ಳಲಾಗಿರುವ ಅಕ್ಕಿ ಮತ್ತು ರಾಗಿಯನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ಮಾ.29 ರಂದು ಮಧ್ಯಾಹ್ನ 12 ಗಂಟೆಗೆ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ 1, ಎ.ಪಿ.ಎಂ.ಸಿ ಆವರಣ, ದಾವಣಗೆರೆ ಇಲ್ಲಿ ಸಹಾಯಕ ನಿರ್ದೇಶಕರ ಸಮಕ್ಷಮದಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top