Connect with us

Dvgsuddi Kannada | online news portal | Kannada news online

ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ

ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಬಾಲವಿಕಾಸ ಅಕಾಡೆಮಿಯು ಕ್ರೀಡಾ ಕ್ಷೇತ್ರ, ನೃತ್ಯ ಕ್ಷೇತ್ರ, ಸಂಗೀತ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕರಕುಶಲ ಕ್ಷೇತ್ರ, ಚಿತ್ರಕಲೆ ಕ್ಷೇತ್ರ, ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರ ಹೀಗೆ 08 ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಾಡಿದ ಅಸಾಧಾರಣಾ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ‘ಬಾಲಗೌರವ’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.

ಪ್ರಶಸ್ತಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ ಪ್ರಶಸ್ತಿ ಪುರಸ್ಕøತ ಮಗುವಾಗಿರಬೇಕು. ಮಕ್ಕಳು ಅಕಾಡೆಮಿಯಿಂದ ಕೊಡಮಾಡುವ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಮಾ.31 ರೊಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004 ಇಲ್ಲಿಗೆ ಕಳುಹಿಸಬಹುದು. ಅರ್ಜಿ ಸಲ್ಲಿಸುವಾಗ ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top