ದಾವಣಗೆರೆ: ಮಾ. 26ರಿಂದ ಎರಡು ದಿನ ಎಲೆಬೇತೂರಲ್ಲಿ ಕನ್ನಡ ಡಿಂಡಿಮ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಾ.26 ಮತ್ತು 27 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ದಾವಣಗೆರೆ ತಾಲೂಕು ಎಲೆಬೇತೂರು ಗ್ರಾಮದ ಮಾಗಾನಹಳ್ಳಿ ಅಂಬಾಸಪ್ಪನವರ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಸಮ್ಮೇಳನದ ಉಧ್ಘಾಟನಾ ಸಮಾರಂಭ ನಡೆಯಲಿದ್ದು,  ಸಿರಿಗೆರೆ ಬೃಹನ್ಮಠದ ಶ್ರೀ  ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ, ಸಮ್ಮೇಳನಾಧ್ಯಕ್ಷಯನ್ನು ಜಿ.ಎಸ್.ಸುಶೀಲಾದೇವಿ ಆರ್.ರಾವ್ ವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್.ಎ ರವೀಂದ್ರನಾಥ್, ಉಧ್ಘಾಟನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ,  ಆಶಯ ನುಡಿಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ನುಡಿಯುವರು. ಸಿರಿಗೆರೆ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿ ಮಹಾಮಂಟಪದ ಉದ್ಘಾಟನೆಯನ್ನು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ್ ಉದ್ಘಾಟಿಸುವರು. ಶ್ರೀ ಬಸವನಾಳ್ ಬಸವರಾಜಪ್ಪ ವೇದಿಕೆ ಉದ್ಘಾಟನೆಯನ್ನು ಮಾಜಿ ಸಚಿವರು ಹಾಗೂ  ಶಾಸಕ  ಡಾ.ಶಾಮನೂರು ಶಿವಶಂಕರಪ್ಪ ನೆರವೇರಿಸುವರು.

ಸ್ಮರಣ ಸಂಚಿಕೆ ಬಿಡುಗಡೆಯನ್ನು ಮಾಜಿ ಕೇಂದ್ರ ಸಚಿವರು ಹಾಗೂ ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಜಿ.ಎಂ ಸಿದ್ದೇಶ್ವರ ಬಿಡುಗಡೆಗೊಳಿಸುವರು. ಸವಗದ್ದಿಗೆ ಸಂಗಮೇಶ್ವರ ಸ್ವಾಮಿ ಮಹಾದ್ವಾರ ಉದ್ಘಾಟನೆಯನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಚನ್ನಗಿರಿ ಕ್ಷೇತ್ರದ ಹಾಲಿ ಶಾಸಕರಾದ ಮಾಡಾಳು ವಿರುಪಾಕ್ಷಪ್ಪ ಉದ್ಘಾಟಿಸುವರು. ಕೃತಿಗಳ ಬಿಡುಗಡೆಯನ್ನು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಹಾಲಿ ಶಾಸಕರಾದ ಎಸ್.ವಿ ರಾಮಚಂದ್ರ ಮತ್ತು ಬಾಬು ಜಗಜೀವನ್‍ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಹಾಲಿ ಶಾಸಕರಾದ ಪ್ರೊ ಎನ್.ಲಿಂಗಣ್ಣ ಅವರುಗಳು ಬಿಡುಗಡೆಗೊಳಿಸುವರು. ಯುವರತ್ನ ಪುನೀತ್ ರಾಜ್‍ಕುಮಾರ್ ಮಹಾದ್ವಾರ ಉದ್ಘಾಟನೆಯನ್ನು ಮಾಜಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಉದ್ಘಾಟಿಸುವರು. ಶ್ರೀ ದುರ್ಗಾಂಭಿಕಾದೇವಿ ಮಹಾದ್ವಾರ ಉದ್ಘಾಟನೆಯನ್ನು ಹರಿಹರ ಶಾಸಕ ಎಸ್.ರಾಮಪ್ಪ ಉದ್ಘಾಟಿಸುವರು.

ಸಮ್ಮೇಳನಾಧ್ಯಕ್ಷರಾದ ಜಿ.ಎಸ್.ಸುಶೀಲಾದೇವಿ ಆರ್.ರಾವ್ ಉಪಸ್ಥಿತರಿರುವರು. ಕನ್ನಡ ಧ್ವಜದ ಹಸ್ತಾಂತರವನ್ನು ನಿಕಟ ಪೂರ್ವ ಸಮ್ಮೇಳನಾಧ್ಯಕ್ಷರಾದ ಎನ್.ಟಿ.ಎರ್ರಿಸ್ವಾಮಿ ಹಸ್ತಾಂತರಿಸುವರು. ಮುಖ್ಯ ಅತಿಥಿಗಳಾಗಿ ಸಾಹಿತಿ, ಸಂಸ್ಕøತಿ ಚಿಂತಕ ಕಾಳೇಗೌಡ ನಾಗವಾರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ್, ಕ.ಸಾ.ಪ ನಿಕಟ ಪೂರ್ವ ಅಧ್ಯಕ್ಷರಾದ ಡಾ.ಹೆಚ್.ಎಸ್.ಮಂಜುನಾಥ್ ಕುರ್ಕಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆ.ಸಿ.ಸುಮಾ ಬಿ.ವಿರುಪಾಕ್ಷಪ್ಪ ರವರು ಆಗಮಿಸುವರು. ಸಮ್ಮೇಳನಾಧ್ಯಕ್ಷರ ಪರಿಚಯವನ್ನು ಕ.ಸಾ.ಪ ಮಾಜಿ ಅಧ್ಯಕ್ಷರಾದ ಎ.ಆರ್ ಉಜ್ಜನಪ್ಪನವರು ನಡೆಸಿಕೊಡುವರು. ಸಮ್ಮೇಳನಾಧ್ಯಕ್ಷರಿಗೆ ಗೌರವ ಸಮರ್ಪಣೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯವರು ನೆರವೇರಿಸುವರು. ಸುಗಮ ಸಂಗೀತ ಕಲಾವಿದರಿಂದ ನಾಡಗೀತೆ ಮತ್ತು ರೈತಗೀತೆ ನಡೆಯಲಿದೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *