ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಮಾ.27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಮಾ.27 ರಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಮ.12 ಕ್ಕೆ ಹರಿಹರ ತಾಲ್ಲೂಕು ಬೆಳ್ಳೂಡಿಯ ಕನಕ ಗುರುಪೀಠಕ್ಕೆ ಆಗಮಿಸುವರು. ಬಳಿಕ ಶ್ರೀಮಠದ 6ನೇ ವಾರ್ಷಿಕೋತ್ಸವ ಹಾಗೂ ಕನಕ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಮ.02 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



