ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2021-22 ನೇ ಸಾಲಿನ ಯೋಜನೆಯಡಿ ದಾವಣಗೆರೆ ಜಿಲ್ಲೆಯ 15 ಜನ ಶ್ರವಣದೋಷವುಳ್ಳ ವಿಕಲಚೇತನರಿಗೆ ಹೊಲಿಗೆಯಂತ್ರಗಳನ್ನು ಉಚಿತವಾಗಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ.ಕೆ.ಕೆ ಪ್ರಕಾಶ್, ಜಿಲ್ಲಾ ಕಿವುಡ ಮತ್ತು ಮೂಗರ ಸಂಘದ ಕಾರ್ಯದರ್ಶಿ ರಾಜಶೇಖರ್ ಬಿ.ಕೆ.ಪಿ ಮತ್ತು ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.



