Connect with us

Dvgsuddi Kannada | online news portal | Kannada news online

ದಾವಣಗೆರೆ: 3 ದಿನಗಳ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ಪ್ರಮುಖ ಸುದ್ದಿ

ದಾವಣಗೆರೆ: 3 ದಿನಗಳ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ದಾವಣಗೆರೆ:  ಕೋವಿಡ್ ಎರಡನೇ ಅಲೆ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟ ಜಿಲ್ಲೆಯ ಎಲ್ಲಾ ವಕೀಲರಿಗೆ ಏ. 15 ರಿಂದ 3 ದಿನಗಳ ಕಾಲ ಲಸಿಕಾ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ಹೇಳಿದರು.

ಜಿಲ್ಲಾ ನ್ಯಾಯಾಲಯ, ಜಿಲ್ಲಾ ವಕೀಲರ ಸಂಘ, ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಏರ್ಪಡಿಸಿದ ಲಸಿಕಾ ಉತ್ಸವ ಅಭಿಯಾನದಲ್ಲಿ ಮಾತನಾಡಿದ ಅವರು, ಈಗಾಗಲೇ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿಗಳು ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದು, ಇದುವರೆಗೂ ಲಸಿಕೆ ಪಡೆಯದ ಜಿಲ್ಲೆಯ 45 ವರ್ಷ ಮೇಲ್ಪಟ್ಟ ಎಲ್ಲಾ ವಕೀಲರು, ಸಿಬ್ಬಂದಿಗಳು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೊನಾ ತೀವ್ರ ಪರಿಣಾಮದಿಂದ ತಪ್ಪಿಸಿಕೊಳ್ಳಲು ಲಸಿಕೆ ಸಹಕಾರಿಯಾಗಿದೆ. ಎಲ್ಲರೂ ಸ್ವಯಂ ಇಚ್ಚೆಯಿಂದ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು.

ಲಸಿಕೆ ಹಾಕಿಸಿಕೊಂಡರೆ ಕೊರೊನಾ ಬರುವುದಿಲ್ಲ ಎಂದು ನಿರ್ಲಕ್ಷಿಸುವಂತಿಲ್ಲ. ಕೊರೊನಾ ಬಂದರೂ ಅದರ ತೀವ್ರತೆ ಕಡಿಮೆ ಇರುತ್ತದೆ ಹಾಗೂ ಸಾವಿನ ದವಡೆಯಿಂದ ಪಾರಾಗಬಹುದು. ಲಸಿಕೆ ಹಾಕಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯದ ಕಡೆ ಸಾಗೋಣ ಎಂದು ಕೆ.ಬಿ. ಗೀತಾ ಅವರು ಸಲಹೆ ನೀಡಿದರು.

ನಗರ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೇಂದ್ರ-1 ರ ಸರ್ಜನ್ ಡಾ. ನಾಗರಾಜ್ ಮಾತನಾಡಿ, ದಾವಣಗೆರೆ ಜಿಲ್ಲಾ ಸಂಕೀರ್ಣಕ್ಕೆ ಒಳಪಡುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ವಕೀಲರಿಗೆ ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು, 45 ವರ್ಷ ಮೇಲ್ಪಟ್ಟವರಿಗೆ 3 ದಿನದ ಅಭಿಯಾನದಲ್ಲಿ ಪ್ರತಿದಿನ 100 ಜನರಂತೆ ಒಟ್ಟು 300 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆÉ ಎಂದರು.

ಕೋವಿಡ್‍ಗೆ ಸಂಬಂಧಿಸಿದ ಲಸಿಕೆ ಹಾಕಿಸಿಕೊಂಡವರಿಗೆ ಅರ್ಧ ಗಂಟೆ ನಿರೀಕ್ಷಣೆಯಲ್ಲಿರಿಸಿ ಪರಿಶೀಲಿಸಲಾಗುವುದು. ಕೋವ್ಯಾಕ್ಸಿನ್ ಲಸಿಕೆ ತೆಗೆದುಕೊಂಡವರಿಗೆ 2ನೇ ಡೋಸ್ 4 ವಾರದ ಬಳಿಕ ಹಾಕಲಾಗುತ್ತದೆ. ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಮೊದಲ ಡೋಸ್ ಪಡೆದ 6 ವಾರದ ನಂತರ 2ನೇ ಡೋಸ್ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅಭಿಯಾನದಲ್ಲಿ ಹಿರಿಯ ನ್ಯಾಯವಾದಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ಟಿ.ಮಂಜುನಾಥ್, ವಕೀಲರಾದ ಅನ್ನಪೂರ್ಣಮ್ಮ, ಎಸ್.ಆರ್.ಚಂದ್ರಶೇಖರ್, ರಮೇಶ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದು ಲಸಿಕೆ ಪಡೆದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top