ದಾವಣಗೆರೆ: ಏ.11 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದಾವಣಗೆರೆ ವೃತ್ತಿರಂಗಭೂಮಿ ರಂಗಾಯಣದ ಉದ್ಘಾಟನೆ ಬೆಳಿಗ್ಗೆ 10.30 ಕ್ಕೆ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಖಾತೆ ಸಚಿವ ವಿ. ಸುನಿಲ್ ಕುಮಾರ್ ನೆರವೇರಿಸುವರು. ಅಧ್ಯಕ್ಷತೆಯನ್ನು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎ. ರವೀಂದ್ರನಾಥ್ ವಹಿಸಲಿದ್ದಾರೆ. ವಿಶೇಷ ಅತಿಥಿಗಳಾಗಿ ಖ್ಯಾತ ಚಲನಚಿತ್ರ ನಟಿ ಶೃತಿ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ, ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಹೊನ್ನಾಳಿ ಶಾಸಕ ಹಾಗೂ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಜಗಳೂರು ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರ, ಚನ್ನಗಿರಿ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಕೆ. ಮಾಡಾಳ್ ವಿರುಪಾಕ್ಷಪ್ಪ, ವಿಧಾನಪರಿಷತ್‍ನ ಸರ್ಕಾರಿ ಮುಖ್ಯ ಸಚೇತಕ ಡಾ. ವೈ.ಎ. ನಾರಾಯಣಸ್ವಾಮಿ, ಮಾಯಕೊಂಡ ವಿಧಾನಸಭಾ ಶಾಸಕರು ಹಾಗೂ ಡಾ| ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ. ಎನ್. ಲಿಂಗಣ್ಣ, ಹರಿಹರ ಶಾಸಕ ಎಸ್. ರಾಮಪ್ಪ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ, ರವಿಕುಮಾರ್ ಎನ್, ಆಯನೂರು ಮಂಜುನಾಥ್, ಚಿದಾನಂದ ಎಂ. ಗೌಡ, ಡಿ.ಎಸ್ ಅರುಣ್, ಕೆ.ಪಿ. ನಂಜುಂಡಿ ವಿಶ್ವಕರ್ಮ, ಎಸ್.ಎಲ್. ಭೋಜೇಗೌಡ, ಕೆ.ಎಸ್ ನವೀನ್, ಡಾ. ತೇಜಸ್ವಿನಿ ಗೌಡ, ಆರ್ ಶಂಕರ್, ಮಹಾನಗರ ಪಾಲಿಕೆಯ ಮಹಾಪೌರರಾದ ಆರ್.ಜಯಮ್ಮ ಗೋಪಿನಾಯ್ಕ್, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ್, ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದ ಮಾಲೀಕರಾದ ಚಿಂದೋಡಿ ಚಂದ್ರಧರ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎನ್ ಮಂಜುಳಾ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಚನ್ನಪ್ಪ ಎ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ.ಎನ್.ಛಲವಾದಿ ರವರು ಪಾಲ್ಗೊಳ್ಳುವರು.
ವೃತ್ತಿ ರಂಗಭೂಮಿ ರಂಗಾಯಣದ ಉದ್ಘಾಟನಾ ಕಾರ್ಯಕ್ರಮದ ನಂತರ ದಾವಣಗೆರೆಯ ಕೆ.ಬಿ.ಆರ್. ಡ್ರಾಮಾ ಕಂಪನಿ ವತಿಯಿಂದ ‘ನೋಡ್ಯಾಳ ರೊಕ್ಕ, ಬರ್ತಾಳ ಪಕ್ಕ’ ಎಂಬ ಸಾಮಾಜಿಕ ಹಾಸ್ಯ ನಾಟಕ ಪ್ರಸ್ತುತಿಯಾಗಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.