ದಾವಣಗೆರೆ: ಹೆರಿಗೆ ಆದ ಬಳಿಕ ತಾಯಿ ಮಗುವನ್ನು ಬಿಟ್ಟು ಹೋದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಮಾರ್ಚ್ 29 ರಂದು ದಾವಣಗೆರೆ ಬಾಪೂಜಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ತಾಯಿ ಜನ್ಮ ನೀಡಿದ್ದರು. ಮಗುವಿನ ಆರೋಗ್ಯ ಸ್ಥಿತಿ ಗಂಭೀರವಿದ್ದ ಹಿನ್ನೆಲೆ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮಗುವಿನ ಆರೈಕೆ ಮಾಡಲಾಗಿತ್ತು. ಆದರೆ, ಹೆರಿಗೆ ಆಗಿ ಏಳು ದಿನವಾದ್ರೂ ತಾಯಿ ಮತ್ತು ಸಂಬಂಧಿಕರು ಪತ್ತೆ ಆಗಿಲ್ಲ.
ತಾಯಿ ಮತ್ತು ಸಂಬಂಧಿಕರು ಪತ್ತೆ ಆಗದ ಹಿನ್ನೆಲೆ ಬಸವನಗರ ಠಾಣೆಯ ಪೊಲೀಸರಿಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಒಂದು ಕೆಜಿ 50 ಗ್ರಾಂ ತೂಕದ ಗಂಡು ಮಗುವಿಗೆ ಆಸ್ಪತ್ರೆಯಲ್ಲಿ ಆರೈಕೆ ಮಾಡಲಾಗುತ್ತಿದೆ. ಇದೇ ಆಸ್ಪತ್ರೆಯಲ್ಲಿ ಈ ಮೊದಲು ಒಂದು ಗಂಡು ಮಗ ಅಪರಣ ಆಗಿತ್ತು. ಇದೇ ಆಸ್ಪತ್ರೆ ಯಲ್ಲಿ ಮಾರ್ಚ 16 ರಂದು ಗಂಡು ಮಗು ಅಪಹರಣ ಪ್ರಕರಣ ನಡೆದಿತ್ತು. ಆ ಘಟನೆಯಲ್ಲಿ ಅಪಹರಣಕ್ಕೆ ಒಳಗಾದ ಮಗು ಇನ್ನೂ ಪತ್ತೆಯಾಗಿಲ್ಲ. ಮಗುವಿಗಾಗಿ ತಾಯಿ ಪರಿತಪಿಸುತ್ತಿದ್ದಾರೆ. ಈ ಮಧ್ಯೆ ಇದೀಗ ಹೊಸ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ.



