ದಾವಣಗೆರೆ: ಉನ್ನತ ಶಿಕ್ಷಣ ಇಲಾಖೆ ಕರ್ನಾಟಕ (Higher Education Department Karnataka) ದಾವಣಗೆರೆ ವಿಶ್ವ ವಿದ್ಯಾಲಯದ ಕುಲಪತಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 2 ದಿನ ಮಾತ್ರ ಬಾಕಿ ಉಳಿದಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 8 ಕೊನೆಯ ದಿನವಾಗಿದೆ. ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬೇಕಿದೆ. ಉದ್ಯೋಗ ಸ್ಥಳ ದಾವಣಗೆರೆಯಾಗಿದ್ದು, ವೇತನ ನಿಯಮಾನುಸಾರ ಇರಲಿದೆ. 10 ವರ್ಷ ಅನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ. ಅರ್ಜಿಯನ್ನು ಸರ್ಕಾರಿ ಪ್ರಧಾನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, 06 ನೇ ಮಹಡಿ, ಗೇಟ್ ಸಂಖ್ಯೆ. 2, ಬಹುಮಹಡಿ ಕಟ್ಟಡ, ಬೆಂಗಳೂರು – 560001, ಇ-ಮೇಲ್ higheducationso1@gmail.com ಕಳುಹಿಸಬಹುದು.