ದಾವಣಗೆರೆ: ವೃತ್ತಿ ರಂಗಭೂಮಿ ರಂಗಾಯಣಕ್ಕೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ 10 ಎಕರೆ ಭೂಮಿ ನೀಡಲು ಸರ್ಕಾರ ಅನುಮತಿ ನೀಡಿದೆ ಎಂದು ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಯಶವಂತ ಸರದೇಶಪಾಂಡೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಂಡಜ್ಜಿಯ ಈ ಜಾಗದಲ್ಲಿ ಮುಂದಿನ ದಿನಗಳಲ್ಲಿ ರಂಗ ಪ್ರಯೋಗಾಲಯ, ಗ್ರಂಥಾಲಯ, ತಾಲೀಮು ಕೊಠಡಿ, ವಸತಿ ಕೊಠಡಿ ಸೇರಿದಂತೆ ಎಲ್ಲ ವ್ಯವಸ್ಥೆ ಕಲ್ಪಿಸುವ ಯೋಜನೆ ಇದೆ ಎಂದರು.
ವಿಧಾನ ಪರಿಷತ್ ಸದಸ್ಯ ಹಾಗೂ ನಾವೆಲ್ಲಾ ರಂಗಾಯಣಕ್ಕೆ ಕೊಂಡಜ್ಜಿಯಲ್ಲಿ ಜಮೀನು ನೀಡುವಂತೆ ಸರ್ಕಾರಕ್ಕೆ ಅನೇಕ ಸಲ ಮನವಿ ಮಾಡಿದ್ದೇವು. ನಮ್ಮ ಮನವಿಗೆ ಸರ್ಕಾರ ಸ್ಪಂದಿಸಿ ಭೂಮಿ ನೀಡಿದೆ. ಇಲ್ಲಿ ಕಲಾವಿದರಿಗೆ ಹೊಸ ಪ್ರಯೋಗದ ತರಬೇತಿ , ಹೊಸಬರಿಗೆ ಲೈಟಿಂಗ್, ಸೌಂಡ್ ನಾಟಕ ರಚನೆ ಬಗ್ಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.