Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ವಂತ ಉದ್ಯಮ ಸ್ಥಾಪಿಸುವರಿಗೆ ಉದ್ಯಮಶೀಲತಾ ಪ್ರೇರಣ ಕಾರ್ಯಕ್ರಮ

davangerer bord

ದಾವಣಗೆರೆ

ದಾವಣಗೆರೆ: ಸ್ವಂತ ಉದ್ಯಮ ಸ್ಥಾಪಿಸುವರಿಗೆ ಉದ್ಯಮಶೀಲತಾ ಪ್ರೇರಣ ಕಾರ್ಯಕ್ರಮ

ದಾವಣಗೆರೆ: ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ದಾವಣಗೆರೆ ಜಿಲ್ಲೆಯ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಒಂದು ದಿನದ “ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ”ವನ್ನು ಏಪ್ರಿಲ್ ತಿಂಗಳ ನಾಲ್ಕನೇ ವಾರದಲ್ಲಿ ದಾವಣಗೆರೆಯಲ್ಲಿ ಸಂಘಟಿಸಲು ಯೋಜಿಸಲಾಗಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಪ್ರೇರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು/ಬರೆಯಲು ಬರುತ್ತಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ: ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಪ್ಲಾಟ್ ನಂ: 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ-577006 ದೂರವಾಣಿ ಸಂಖ್ಯೆ: 9164742033 ಬಸವರಾಜ ಜಿ.ಬಿ ಹಾಗೂ ಶ್ರೀ ವಿನಯ ಜಿ.ಕೆ ತರಬೇತಿದಾರರು, ಸಿಡಾಕ್ ದಾವಣಗೆರೆ ವಿಭಾಗ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ದಿನಾಂಕ ಏ.26 ರೊಳಗೆ 2 ಪಾಸ್‍ ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್‍ನ ಪ್ರತಿಯೊಂದಿಗೆ ಸಂಪರ್ಕಿಸಬಹುದೆಂದು ದಾವಣಗೆರೆ ಸಿಡಾಕ್‍ನ ಕಾರ್ಯಕ್ರಮ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top