Connect with us

Dvgsuddi Kannada | online news portal | Kannada news online

ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಸೈನ್ಸ್ ಪಿಯುಸಿ ಕಾಲೇಜಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಸೈನ್ಸ್ ಪಿಯುಸಿ ಕಾಲೇಜಿಗೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಆವರಗೊಳ್ಳ ಹಾಗೂ ಕಾರಿಗನೂರು ಇಲ್ಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ (ಪಿಸಿಎಂಬಿ/ಪಿಸಿಎಂಸಿ) ಕೋರ್ಸ್‍ಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಜಿಲ್ಲೆಯ ಯಾವುದೇ ಕ್ರೈಸ್ ವಸತಿ ಶಾಲೆ/ಕಾಲೇಜುಗಳಿಂದ ಆನ್‍ಲೈನ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರುಗಳಾದ ಡಾ.ಸತೀಶ್ ಸಿ.ಎಂ.ಮೊ.ಸಂ: 9535484045 ಹಾಗೂ ಶ್ರೀಮತಿ ಸುಫಿಯಾ ಅವರಗೊಳ್ಳ ಮೊ.ಸಂ: 6363184579 ಸಂಖ್ಯೆಗೆ ಕಾಲೇಜ್‍ನ ಅವಧಿಯಲ್ಲಿ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top