ದಾವಣಗೆರೆ: ಔಷಧಿ ತರಲು ಹೋಗಿದ್ದ ವೃದ್ಧನಿಗೆ ಪೊಲೀಸರು ದಂಡ ಹಾಕಿದ್ದದ್ದಾರೆ. ಇದರಿಂದ ಅಸಮಾಧಾನಗೊಂಡ ವೃದ್ಧ ನಡು ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ನಗರದ ರೈಲ್ವೆ ನಿಲ್ದಾಣದ ಸಮೀಪದ ಈ ಘಟನೆ ನಡೆದಿದೆ.
ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಸರ್ಕಾರ ರಾಜ್ಯಾದ್ಯಂತ ಕರ್ಫ್ಯೂ ಜಾರಿ ಮಾಡಿದೆ. ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಿದೆ. ಓಷಧಿ ಖರೀದಿಗೆ ಯಾವುದೇ ನಿರ್ಬಂಧವಿಲ್ಲ. ಹೀಗಾಗಿ ಪೊಲೀಸರು ದಂಡ ವಿಧಿಸಿದ್ದಕ್ಕೆ ಆಕ್ರೋಶ ಹೊರಹಾಕಿದ್ಧಾರೆ.
ಕಾಯಿಪೇಟೆಯ ಬಸವರಾಜ್ ಎಂಬ ವೃದ್ಧ ಪೊಲೀಸರ ವರ್ತನೆ ಖಂಡಿಸಿ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ್ದು, ತನ್ನ ಪುತ್ರನೊಂದಿಗೆ ಔಷಧಿ ತರಲು ಹೋಗಿದ್ದರು. ಈ ವೇಳೆ ರೈಲ್ವೆ ಸ್ಟೇಷನ್ ಮುಂಭಾಗದಲ್ಲಿ ಪೊಲೀಸರು ಹಿಡಿದು ಬೈಕ್‌ಗೆ 500 ರೂಪಾಯಿ ದಂಡ ಹಾಕಿದ್ದಾರೆ. ಔಷಧಿ ತರಲು ಹೋಗುತ್ತಿದ್ದೇವೆ ಎಂದು ರಶೀದಿ ತೋರಿಸಿದರೂ, ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.



