ದಾವಣಗೆರೆ: ಜವಾಹರ್ ನವೋದಯ ವಿದ್ಯಾಲಯದ ಪ್ರಸಕ್ತ ಸಾಲಿನ 06 ನೇ ತರಗತಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಅವರ ಪ್ರವೇಶ ಪತ್ರವನ್ನು ಅವರು ವ್ಯಾಸಂಗ ಮಾಡುತ್ತಿರುವ ಶಾಲಾ ಮುಖ್ಯೋಪಾದ್ಯಯರಿಂದ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಈಗಾಗಲೇ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳು ಡೌನ್‍ಲೋಡ್ ಮಾಡಿಕೊಂಡಿದ್ದಲ್ಲಿ ಅದನ್ನು ಶಾಲಾ ದಾಖಲೆಗಳಿಂದ ಪರಿಶೀಲನೆಯ ನಂತರ ಸಂಬಂಧಪಟ್ಟ ಮುಖ್ಯೋಪಾಧ್ಯಾಯರಿಂದ ಸಹಿ ಮತ್ತು ಸೀಲು ಮಾಡಿ ಪ್ರಮಾಣೀಕರಿಸಲಾದ ಪ್ರವೇಶ ಪತ್ರವನ್ನು ತಪ್ಪದೆ ಪರೀಕ್ಷೆಗೆ ತರಬೇಕೆಂದು ದಾವಣಗೆರೆ ಜವಾಹರ್ ನವೋದಯ ವಿಶ್ವವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



