Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದಿಂದ ಮಹಿಳಾ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ

ದಾವಣಗೆರೆ

ದಾವಣಗೆರೆ: ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದಿಂದ ಮಹಿಳಾ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ

ದಾವಣಗೆರೆ:  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಜಿಲ್ಲೆಯ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಏ.27 ರಂದು ಒಂದು ದಿನದ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ, ಭಗೀರಥ ಸರ್ಕಲ್ ನಿಟುವಳ್ಳಿಯಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಪ್ರೇರೇಪಣೆ, ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು ಅಥವಾ ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.

ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ. ಭಾಗವಹಿಸಲು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು/ಬರೆಯಲು ತಿಳಿದಿರಬೇಕು, ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 2 ಪಾಸ್‍ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಪ್ಲಾಟ್ ನಂ 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ.ರಸ್ತೆ ದಾವಣಗೆರೆ 577 006, ದೂರವಾಣಿ ಸಂಖ್ಯೆ ಬಸವರಾಜ್ ಜಿ.ಬಿ 9164742033 ಹಾಗೂ ವಿನಯ್ ಜಿ.ಕೆ 9886115200 ತರಬೇತಿದಾರರು ದಾವಣಗೆರೆ ವಿಭಾಗ ಇವರನ್ನು ಸಂಪರ್ಕಿಸಬಹುದಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top