ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಸಂಯುಕ್ತಾಶ್ರದಲ್ಲಿ ನಾಳೆ (ಏ. 21) ಮಧ್ಯಾಹ್ನ 12.30ಕ್ಕೆ ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಉದ್ಘಾಟಿಸುವರು. ಶಾಸಕ ಎಸ್.ಎ.ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು. ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಸವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡುವರು.
ಚನ್ನಗಿರಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಮಾಯಕೊಂಡ ಶಾಸಕ ಹಾಗೂ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ, ಸರ್ಕಾರದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್.ರಾಮಪ್ಪ, ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿ ಗೌಡ, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಚಿದಾನಂದ.ಎಂ.ಗೌಡ, ಆರ್.ಶಂಕರ್, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಮಹಾನಗರ ಪಾಲಿಕೆ ಮೇಯರ್ ಆರ್.ಜಯಮ್ಮ, ದೂಢಾ ಅಧ್ಯಕ್ಷ ಕೆ.ಎಂ ಸುರೇಶ್ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಜನಸ್ನೇಹಿ ಆಡಳಿತದ ಕುರಿತು ದಾವಣಗೆರೆ ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಪ್ರಾಂಶುಪಾಲ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಗಣ್ಯರು, ಜಿಲ್ಲಾ ಹಾಗೂ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ದಾವಣಗೆರೆಯ ಜಿಲ್ಲಾಧ್ಯಕ್ಷ ಬಿ. ಪಾಲಾಕ್ಷಿ ಭಾಗವಹಿಸಲಿದ್ದಾರೆ.



