ದಾವಣಗೆರೆ: ಕನ್ನಡದ ಮೇರು ನಟ ಡಾ. ರಾಜ್ ಕುಮಾರ್ ಅವರ ಜನ್ಮದಿನವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿ ವತಿಯಿಂದ ʻʻಕನ್ನಡ ಅಭಿಮಾನದ ದಿನʼʼವನ್ನಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದ್ದಾರೆ.
ಇಂದು ಸಂಜೆ 5 ಘಂಟೆಗೆ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ಡಾ.ರಾಜ್‌ಕುಮಾರ್ ಅವರ ಜನ್ಮದಿನದ ಈ ವಿಶೇಷ ದಿನದಂದು “ಕನ್ನಡ ಶಾಲೆ ಉಳಿಸಿ – ಕನ್ನಡ ಬೆಳೆಸಿ” ಎಂಬ ಸಂದೇಶವನ್ನು ಸಾರುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ವಹಿಸುವರು. ಉದ್ಘಾಟನೆಯನ್ನು ಅಖಲ ಕರ್ನಾಟಕ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ರಾಜ್ಯ ಸಂಚಾಲಕ ಕೆ.ಜಿ.ಶಿವಕುಮಾರ್ ನೆರವೇರಿಸುವರು. ಡಾ.ರಾಜ್‌ಕುಮಾರ್ ಅವರ ಕುರಿತಾಗಿ ಹಿರಿಯ ಕನ್ನಡಪರ ಹೋರಾಟಗಾರ ಬಂಕಾಪುರದ ಚನ್ನಬಸಪ್ಪ ಉಪನ್ಯಾಸ ನೀಡುವರು. ಕನ್ನಡ ಶಾಲೆ ಉಳಿಸಿ – ಕನ್ನಡ ಬೆಳೆಸಿ ವಿಷಯದ ಬಗ್ಗೆ ಸಹಾಯಕ ಪ್ರಾಧ್ಯಾಪಕ ಡಾ.ಎ.ಎಂ.ರಾಜಶೇಖರಯ್ಯ ಉಪನ್ಯಾಸ ನೀಡುವರು ಹಾಗೂ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಭಾಗವಹಿಸುವರು.
ಡಾ.ರಾಜ್‌ಕುಮಾರ್ ಅಭಿಮಾನಿಗಳು, ಕನ್ನಡಾಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ ಮನವಿ ಮಾಡಿದ್ದಾರೆ.



