ದಾವಣಗೆರೆ: ಸರ್ಕಾರದ ಆದೇಶದಂತೆ 2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಜಿಲ್ಲೆಯ ಈ ಕೆಳಕಂಡ ತಾಲ್ಲೂಕುಗಳ ಎಪಿಎಂಸಿ ಪ್ರಾಂಗಣದಲ್ಲಿ ರೈತರ ನೋಂದಣಿ ಮತ್ತು ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.
ದಾವಣಗೆರೆ, ಹರಿಹರ, ಚನ್ನಗಿರಿ, ಜಗಳೂರು ಮತ್ತು ಹೊನ್ನಾಳಿ ತಾಲ್ಲೂಕುಗಳಲ್ಲಿ ರಾಗಿ ಮಾರಾಟ ಮಾಡಲು ಬಾಕಿ ಇರುವ ರೈತರು ಕೃಷಿ ಇಲಾಖೆಯಿಂದ ಪಡೆದುಕೊಂಡಿರುವ ‘ಫ್ರೂಟ್ ಐಡಿ’ಯೊಂದಿಗೆ ಆಯಾ ತಾಲ್ಲೂಕಿನ ಖರೀದಿ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಸಿಕೊಂಡು ರಾಗಿ ಮಾರಾಟ ಮಾಡತಕ್ಕದ್ದು. ಸರ್ಕಾರದ ಆದೇಶದಲ್ಲಿ ಸೂಚಿಸಿರುವಂತೆ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಕ್ವಿಂಟಾಲ್‍ಗೆ ರೂ.3377 ರ ದರದಲ್ಲಿ ಖರೀದಿಸಲಾಗುವುದು. ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್‍ನಂತೆ ಗರಿಷ್ಠ 20 ಕ್ವಿಂಟಲ್ ರಾಗಿಯನ್ನು ಖರೀದಿಸಲಾಗುವುದು.
ಉತ್ತಮ ಗುಣಮಟ್ಟದ ಮಾದರಿಯ ರಾಗಿಯನ್ನು ಮಾತ್ರ ಖರೀದಿಸಲಾಗುವುದು.
ರಾಜ್ಯದಲ್ಲಿ 1.14 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿ ಮಾಡಲು ಅವಕಾಶ ಕಲ್ಪಿಸಿದ್ದು, 1.14 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ನೋಂದಣಿಯಾದ ಕೂಡಲೇ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ. ಜಿಲ್ಲೆಯ ರೈತರು ಈ ಸದಾವಕಾಶವನ್ನು ಉಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



