ದಾವಣಗೆರೆ: ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರಗಳಿದ್ದರೂ ರೈತರ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಸಿಗುತ್ತಿಲ್ಲ. ಡಬಲ್ ಎಂಜಿನ್ ಗಳು ಪರಸ್ಪರ ವಿರುದ್ಧ ದಿಕ್ಕಿನಲ್ಲಿ ನಡೆದರೆ ಪ್ರಯೋಜನವಿಲ್ಲ ಎಂದು ಬಿಜೆಪಿ ಶಾಸಕ ಎಸ್. ಎ.ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಆತ್ಮ ನಿರ್ಭರ ಕೃಷಿ ಮತ್ತು ಸಿರಿಧಾನ್ಯಗಳ ವರ್ಷಾಚರಣೆ ಮೇಳದಲ್ಲಿ ಮಾತನಾಡಿದ ಅವರು, ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಸಿಗುವಂತೆ ಮಾಡಲು ಕೇಂದ್ರ ಹಾಗೂ ರಾಜ್ಯ ನಾಯಕರು ಗಮನಹರಿಸಬೇಕು. ಇನ್ನು ಪೆಟ್ರೋಲ್ , ಡೀಸೆಲ್ ಬೆಲೆ, ಕೃಷಿ ಪರಿಕರಗಳ ದುಪ್ಪಾಟ್ಟಗಿದೆ. ಆದರೆ, ಕೃಷಿ ಉತ್ಪನ್ನಗಳ ಬೆಲೆ ಮಾತ್ರ ಹೆಚ್ಚಾಗಿಲ್ಲ. ಸರ್ಕಾರ ಬೆಂಬಲ ಬೆಲೆ ಘೋಸಿದ್ದರೂ, ವಾಸ್ತವವಾಗಿ ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ಹೇಳಿದರು.