Connect with us

Dvgsuddi Kannada | online news portal | Kannada news online

ದಾವಣಗೆರೆ: ಏ. 29 ರಂದು ಸಿಎಂ ಜಗಳೂರಿಗೆ ಆಗಮನ;1,404.15 ಕೋಟಿ ವಿವಿಧ ಕಾಮಗಾರಿಗಳಿಗೆ ಚಾಲನೆ; ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ

ದಾವಣಗೆರೆ: ಏ. 29 ರಂದು ಸಿಎಂ ಜಗಳೂರಿಗೆ ಆಗಮನ;1,404.15 ಕೋಟಿ ವಿವಿಧ ಕಾಮಗಾರಿಗಳಿಗೆ ಚಾಲನೆ; ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗರೆ: ದಾವಣಗೆರೆ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲ್ಲೂಕು ಹಾಗೂ ಬರದ ತಾಲ್ಲೂಕು ಎಂದೇ ಖ್ಯಾತಿ ಪಡೆದ ಜಗಳೂರು ತಾಲ್ಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಏಪ್ರಿಲ್ 29 ರಂದು ರೂ.1404.15 ಕೋಟಿಯಷ್ಟು ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವರು ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದರು.

ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಹಾಗೂ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರೂ.1383.10 ಕೋಟಿ ಮೌಲ್ಯದ 19 ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ರೂ.21.05 ಕೋಟಿ ಮೌಲ್ಯದ 18 ಕಾಮಗಾರಿಗಳಿಗೆ ಉದ್ಘಾಟನೆ ನೆರವೇರಿಸುವರು. ಮತ್ತು ಸುಮಾರು 12 ಇಲಾಖೆಗಳಿಂದ 1248 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದು ಜಗಳೂರು ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ಏ.29 ರಂದು ಬೆಳಗ್ಗೆ 11.30 ಕ್ಕೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರದಷ್ಟು ಜನರು ಭಾಗವಹಿಸಲಿದ್ದಾರೆ ಎಂದು ಸಂಸದರು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತರಿರುವರು. ಹಾಗೂ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ, ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ವಸತಿ ಸಚಿವ ವಿ.ಸೋಮಣ್ಣ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಭಾಗವಹಿಸುವರು. ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಅಧ್ಯಕ್ಷತೆ ವಹಿಸುವರು. ಇದಲ್ಲದೆ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ, ಜಿಲ್ಲೆಯ ಶಾಸಕರು ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಮಾಯಕೊಂಡ ಶಾಸಕರು ಹಾಗೂ ಡಾ; ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪ್ರೊ; ಎನ್.ಲಿಂಗಣ್ಣ, ಚನ್ನಗಿರಿ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮರ್ಜಕ ನಿಯಮಿತ ಅಧ್ಯಕ್ಷರಾದ ಮಾಡಾಳು ವಿರೂಪಾಕ್ಷಪ್ಪ, ಸರ್ಕಾರದ ಮುಖ್ಯ ಸಚೇತಕರು, ವಿಧಾನ ಪರಿಷತ್ ಡಾ; ವೈ.ಎ.ನಾರಾಯಣಸ್ವಾಮಿ, ಶಾಸಕರಾದ ಎಸ್.ಎ.ರವೀಂದ್ರನಾಥ್, ಡಾ; ಶಾಮನೂರು ಶಿವಶಂಕರಪ್ಪ, ಎನ್.ರಾಮಪ್ಪ, ವಿಧಾನಪರಿಷತ್ ಸದಸ್ಯರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ಡಾ; ತೇಜಸ್ವಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಆರ್.ಶಂಕರ್, ಡಿ.ಎಸ್.ಅರುಣ್, ಕೆ.ಎಸ್.ನವೀನ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಸ್.ಸಿದ್ದಪ್ಪ, ಉಪಾಧ್ಯಕ್ಷೆ ಮಂಜಮ್ಮ ಬಿ.ಮಂಜಣ್ಣ ಭಾಗವಹಿಸುವರು ಎಂದರು.

ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ವಿ.ರಾಮಚಂದ್ರರುವರು ಮಾತನಾಡಿ ತಾಲ್ಲೂಕಿನಲ್ಲಿ ಅಭಿವೃದ್ದಿ ಪರ್ವ ನಡೆಯುತ್ತಿದ್ದು ವಿಶೇಷವಾಗಿ ತಾಲ್ಲೂಕಿನ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಗೆ ಚಾಲನೆ ನೀಡುತ್ತಿರುವುದು ಅದ್ದೂರಿ ಕಾರ್ಯಕ್ರಮವಾಗಿದೆ. ಇದು ರಾಷ್ಟ್ರೀಯ ಯೋಜನೆ ಹಂತದಲ್ಲಿದ್ದು ಇದರಿಂದ 9 ಕೆರೆಗಳಿಗೆ ನೀರು ತುಂಬಿಸುವುದು ಮತ್ತು 18423 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದು ಸರ್ಕಾರದ ಶಿಷ್ಟಾಚಾರದನ್ವಯವೇ ಕಾರ್ಯಕ್ರಮ ನಡೆಯಲಿದೆ ಎಂದ ಅವರು ಸುಮಾರು 1248 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಾಗುತ್ತದೆ ಎಂದರು.

ಉದ್ಘಾಟನೆಯಾಗಲಿರುವ ಕಾಮಗಾರಿಗಳು; ತಲಾ ರೂ.3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಪಟ್ಟಣ ಪಂಚಾಯತಿ ಕಚೇರಿ ಹಾಗೂ ರಂಗಮಂದಿರ, ರೂ.2.16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಉಜ್ಜಪ್ಪವಡೇರಹಳ್ಳಿ ಗ್ರಾಮ ಆರೋಗ್ಯ ಕೇಂದ್ರ ಮತ್ತು ಮಲ್ಲಾಪುರ ಗ್ರಾಮದಲ್ಲಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರ, ರೂ.2 ಕೋಟಿ ವೆಚ್ಚದಲ್ಲಿ ಜಗಳೂರು ಪಟ್ಟಣದಲ್ಲಿ ನಿರ್ಮಿಸಿರುವ ವಿ.ಐ.ಪಿ.ಗೆಸ್ಟ್ ಹೌಸ್, ರೂ.2 ಕೋಟಿ ವೆಚ್ಚದ ಅಣಬೂರು ಗ್ರಾಮದ ವಡಕಸರ ಹಳ್ಳ ಹಾಗೂ ಜಂಗಮತುಂಬಿಗೆರೆ ಹತ್ತಿರದ ಹಳ್ಳಕ್ಕೆ ನಿರ್ಮಿಸಲಾಗಿರುವ ಚಕ್ ಡ್ಯಾಂ, ರೂ.75 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹುಚ್ಚಂಗಿಪುರದ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ರೂ.50 ಲಕ್ಷ ವೆಚ್ಚದಲ್ಲಿ ದೇವಿಕೆರೆ ಗ್ರಾಮ ಪಂಚಾಯತಿಯ ಕೊಡದಗುಡ್ಡದಲ್ಲಿ ನಿರ್ಮಿಸಲಾಗಿರುವ ಯಾತ್ರಿ ನಿವಾಸ, ರೂ.1.68 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕೊಣಚಗಲ್ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ರೂ.2.68 ಕೋಟಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಿರುವ ಬಿಳಚೋಡು ಗ್ರಾಮದ ಸ.ಹಿ.ಪ್ರಾ.ಶಾಲೆ, ರೂ.4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅರಸೀಕೆರೆ ಗ್ರಾಮದ ರಸ್ತೆಗಳು, ಉಚ್ಚಂಗಿದುರ್ಗದ ಗ್ರಾಮದ ರಸ್ತೆಗಳು ಹಾಗೂ ರೂ.1.50 ಲಕ್ಷ ವೆಚ್ಚದ ಸೊಕ್ಕೆ ಗ್ರಾಮದ ಹೈಟೆಕ್ ಗ್ರಂಥಾಲಯ ಸೇರಿ ಒಟ್ಟು ರೂ.21.05 ಕೋಟಿ ವೆಚ್ಚದ ಒಟ್ಟು 18 ಪೂರ್ಣಗೊಂಡ ಕಾಮಗಾರಿಗಳನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಲಿದ್ದಾರೆ.

ರೂ.1383.10 ಕೋಟಿ ವೆಚ್ಚದಲ್ಲಿ 19 ಕಾಮಗಾರಿಗಳಿಗೆ ಶಂಕುಸ್ಥಾಪನೆ: ಚಿತ್ರದುರ್ಗ ಭದ್ರಾ ಮೇಲ್ದಂಡೆ ಯೋಜನಾ ವಲಯ ವಿಶ್ವೇಶ್ವರಯ್ಯ ಜಲನಿಗಮದ ವತಿಯಿಂದ ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಜಗಳೂರು ತಾಲ್ಲೂಕಿಗೆ 62 ಗ್ರಾಮಗಳಿಗೆ ಹನಿನೀರಾವರಿ ಸೌಲಭ್ಯ ಹಾಗೂ 9 ಕೆರೆಗಳಿಗೆ ನೀರು ತುಂಬಿಸುವ ರೂ. 125514 ಲಕ್ಷ ವೆಚ್ಚದ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.
ಕರ್ನಾಟಕ ಗೃಹ ಮಂಡಳಿ ವತಿಯಿಂದ ರೂ. 2670 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕಿನ ಜಗಳೂರು ಮತ್ತು ಮರೇನಹಳ್ಳಿ ಗ್ರಾಮಗಳ ಸ.ನಂಗಳಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ನಿರ್ಮಾಣಗೊಳ್ಳುವ ನಿವೇಶನ ಮತ್ತು ಅಭಿವೃದ್ಧಿ ಕಾಮಗಾರಿ.

ಲೋಕೋಪಯೋಗಿ ಇಲಾಖೆ ವತಿಯಿಂದ ರೂ.2250 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕಿನ ಎಸ್‍ಹೆಚ್‍ಡಿಪಿ ಯೋಜನೆಯಡಿ 5 ರಸ್ತೆ ಕಾಮಗಾರಿ ಅಭಿವೃದ್ಧಿ, ರೂ.2600 ಲಕ್ಷ ವೆಚ್ಚದಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮಂಡ್ಯ ಹಡಗಲಿ ರಾಜ್ಯ ಹೆದ್ದಾರಿ 047ರ ರಸ್ತೆ ಸರಪಳಿ ಕೆರೆ ಏರಿಗೆ ಸುರಕ್ಷತಾ ತಡೆಗೋಡೆ, ಕ್ರಾಷ್ ಬ್ಯಾರಿಯಲ್, ಅಳವಡಿಕೆ, ಇತರೆ ಸುರಕ್ಷಾ ಕಾಮಗಾರಿಗೆ ಶಂಕುಸ್ಥಾಪನೆ.
ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವತಿಯಿಂದ ರೂ.2131 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 30 ಗ್ರಾಮಗಳ ಮನೆ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಒದಗಿಸುವ ಕಾಮಗಾರಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರೂ.2123.07 ವೆಚ್ಚದಲ್ಲಿ ಜಗಳೂರು ಪಟ್ಟಣದ ವಿವಿಧ ಕೊಳಚೆ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ 300 ಮನೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ, ಕೃಷಿ ಇಲಾಖೆ ವತಿಯಿಂದ ರೂ.1174 ಲಕ್ಷ ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಯೋಜನೆ2.00 5 ವರ್ಷದ ಕಾರ್ಯಕ್ರಮದ ಒಟ್ಟು ಪ್ರಾಜೆಕ್ಟ್ ವಿಸ್ತೀರ್ಣ 5340 ಹೆಕ್ಟೇರ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ರೂ. 500 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಬಿಳಿಚೋಡು ಹೋಬಳಿ ಬಗ್ಗೇನಹಳ್ಳಿ ಗ್ರಾಮದಲ್ಲಿ ಸ.ನಂ 13ರ ಜಮೀನಿನಲ್ಲಿ 9.36 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು.

ಸಮಾಜ ಕಲ್ಯಾಣ ಇಲಾಖೆಯಿಂದ ರೂ.450 ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಅಣಬೂರು, ಅರಿಶಿನಗುಂಡಿ, ಬಿಸ್ತುವಳ್ಳಿ, ಸಾಗಲಕಟ್ಟೆ, ಗುತ್ತಿದುರ್ಗ, ಚದುರಗೊಳ್ಳ, ತುಪ್ಪದಹಳ್ಳಿ, ಅಸಗೋಡು, ಪಲ್ಲಾಗಟ್ಟೆ, ಯರಲಗಟ್ಟೆ, ಹನುಮಂತಾಪುರ, ಭರಮಸಮುದ್ರ ಗ್ರಾಮಗಳಲ್ಲಿ ಸ್ಮಶಾನ ಅಭಿವೃದ್ಧಿ ಕಾಮಗಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ರೂ.80ಲಕ್ಷ ವೆಚ್ಚದಲ್ಲಿ ಜಗಳೂರು ತಾಲ್ಲೂಕು ಕಸ್ತೂರಿಪುರ, ಮಾಗಡಿ, ಐಯ್ಯನಹಳ್ಳಿ, ಗೋಪಾಲಪುರ ಗ್ರಾಮಗಳಲ್ಲಿ ಪರಿಶಿಷ್ಟ ಪಂಗಡ ಸ್ಮಶಾನ ಅಭಿವೃದ್ಧಿ ಕಾಮಗಾರಿ, ಶಿಕ್ಷಣ ಇಲಾಖೆಯಿಂದ ರೂ.31.50 ಲಕ್ಷ ವೆಚ್ಚದಲ್ಲಿ ಜಗಳೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ರೂ.16.50ಲಕ್ಷ ವೆಚ್ಚದಲ್ಲಿ ಪಲ್ಲಾಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಿರ್ಮಾಣ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದಿಂದ ರೂ.485 ಲಕ್ಷದಲ್ಲಿ ಉಚ್ಚಂಗಿ ಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೋಧನಾ ಕೊಠಡಿ, ಪಲ್ಲಾಗಟ್ಟೆ ಗ್ರಾಮ ರಸ್ತೆ, ವಿದ್ಯುತ್ ದೀಪ ಅಳವಡಿಕೆ, ಬಿಳಿಚೋಡು ಗ್ರಾಮದ ಮಹರ್ಷಿ ವಾಲ್ಮೀಕಿ ಭವನ, ಕೆಆರ್‍ಡಿಎಲ್‍ನಿಂದ ರೂ.465.85 ಲಕ್ಷ ವೆಚ್ಚದಲ್ಲಿ ಜಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಉಚ್ಚಂಗಿ ದುರ್ಗ ಗ್ರಾಮದ ಡಾಮೆಂಟ್ರಿ ಮತ್ತು ಪ್ರವಾಸ ಅಭಿವೃದ್ಧಿ ಕಾಮಗಾರಿ, ಕೆರೆ ರಸ್ತೆ ಅಭಿವೃದ್ಧಿ ಕಾಮಗಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ.75 ಲಕ್ಷದಲ್ಲಿ ವಸತಿ ನಿಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು.

1248 ಫಲಾನುಭವಿಗಳು: ಕಂದಾಯ ಇಲಾಖೆಯಿಂದ ಬಗರ್ ಹುಕ್ಕುಂ ಸಾಗವಳಿಯ 100 ಫಲಾನುಭವಿಗಳಿಗೆ ಪತ್ರ ವಿತರಣೆ, 62 ಫಲಾನುಭವಿಗಳಿಗೆ 94 ಸಿ ಖಾಯಂ ಹಕ್ಕು ಪತ್ರ, ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕೋವಿಡ್‍ನಿಂದ ಮೃತಪಟ್ಟ 82 ಕುಟುಂಬದ ವಾರಸುದಾರರಿಗೆ ಪರಿಹಾರದ ಆದೇಶ ಪ್ರತಿ, ಇಂದಿರಾಗಾಂಧಿ ವೃದ್ಧಾಪ್ಯ ವೇತನದ 37 ಫಲಾನಿಭವಿಗಳಿಗೆ ಆದೇಶ ಪ್ರತಿ, 12 ಫಲಾನುಭವಿಗಳಿಗೆ ವಿಧವಾ ವೇತನ, ಅಂಗವಿಕಲ ವೇತನದ ಐವರು ಫಲಾನುಭವಿಗಳಿಗೆ ಆದೇಶ ಪ್ರತಿ, ಸಂಧ್ಯಾ ಸುರಕ್ಷಾ ಯೋಜನೆಯಲ್ಲಿ 60 ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ ಮಾಡಲಾಗುವುದು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡ ಅಭಿವೃದ್ಧಿ ನಿಗಮದಿಂದ 319 ಫಲಾನುಭವಿಗಳಿಗೆ ನೇರ ಸಾಲ , 10 ಫಲಾನುಭವಿಗಳಿಗೆ ಉದ್ಯಮಶೀಲತಾ ಯೋಜನೆಯಡಿತಯಲ್ಲಿ ಐರವಾತ ಕಾರು ವಿತರಣೆ. ಪ್ರೇರಣ ಮೈಕ್ರೋ ಕ್ರೆಡಿಟ್ ಯೋಜನೆಯಲ್ಲಿ 100 ಫಲಾನುಭವಿಗಳು, ಭೂ ಒಡೆತನ ಯೋಜನೆಯಡಿಯಲ್ಲಿ 2 ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಲಾಗುವುದು.

ಶಿಶು ಅಭಿವೃದ್ಧಿ ಇಲಾಖೆಯಿಂದ ಅಮೃತ ಕಿರು ಉದ್ಯಮಿ ಯೋಜನೆಯಡಿ 33 ಸ್ವಸಹಾಯ ಗುಂಪುಗಳಿಗೆ ಬೀಜ ಧನಚೆಕ್ ವಿತರಣೆ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಇಲಾಖೆಯಿಂದ ಸೌಲಭ್ಯ ಪಡೆದ 95 ಫಲಾನುಭವಿ ರೈತರಿಗೆ ಸೌಲಭ್ಯ ವಿತರಣೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ 2 ಫಲಾನುಭವಿಗಳು, ಟ್ಯಾಕ್ಸಿ, ಗೂಡ್ಸ್ ಖರೀದಿ ಯೋಜನೆ ಅಡಿಯಲ್ಲಿ 2 ಫಲಾನುಭವಿಗಳು ಆದೇಶ ಪತ್ರ ವಿತರಣೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 12 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು, ಅರಣ್ಯ ಇಲಾಖೆಯಿಂದ 60 ಫಲಾನುಭವಿಗಳಿಗೆ ಪರಿಹಾರ ವಿತರಣೆ-ಜಗಳೂರು ವಲಯದಲ್ಲಿ ವನ್ಯಪ್ರಾಣಿ ದಾಳಿಯಿಂದ ಬೆಳೆ ಹಾನಿ, ಮಾನವ ಗಾಯ, ಮೃತಪಟ್ಟ ಸಾಕು ಪ್ರಾಣಿಗಳಿಗೆ ಪರಿಹಾರ ಧನ ವಿತರಣೆ ಮಾಡಲಾಗುವುದು. ರೇಷ್ಮೆ ಇಲಾಖೆಯಿಂದ ಜಿಲ್ಲಾ ಮಟ್ಟದ 3 ಪ್ರಗತಿಪರ ರೇಷ್ಮೆ ಬೆಳೆಗಾರರ ಪ್ರಶಸ್ತಿ ವಿತರಣೆ ಮಾಡಲಾಗುವುದು. ಮೀನುಗಾರಿಗೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯ ಯೋಜನೆಯಲ್ಲಿ 7 ಫಲಾನುಭವಿಗಳು ಸೌಲಭ್ಯ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 34 ಫಲಾನುಭವಿಗಳಿಗೆ ಮೋಟಾರ್ ವಿತರಣೆ, ಗ್ರಾಮ ಪಂಚಾಯತ್‍ನಿಂದ ಗ್ರಾಮೀಣ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 15 ಘನತ್ಯಾಜ್ಯ ವಿಲೇವಾರಿಯ ಸ್ವಚ್ಛ ವಾಹನಗಳ ಉದ್ಘಾಟನೆ ಮಾಡಲಾಗುತ್ತದೆ.

ಸಹಕಾರ ಇಲಾಖೆಯಿಂದ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕ್, ಪಲ್ಲಾಗಟ್ಟೆ ಶಾಖೆ ಹಾಗೂ ದೊಣ್ಣೆ ಹಳ್ಳಿ ಶಾಖೆಯ 124 ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಸಾಲ ಸೌಲಭ್ಯ ಮಂಜೂರಾತಿ ಆದೇಶ ಪತ್ರ ವಿತರಣೆ ಮಾಡಲಾಗುತ್ತದೆ.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ.ರಿಷ್ಯಂತ್, ತಹಶೀಲ್ದಾರ್ ಸಂತೋಷ್ , ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಪತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top