Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ration card

ದಾವಣಗೆರೆ

ದಾವಣಗೆರೆ: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ:  ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿರುವ ಯಲವಟ್ಟಿ ತಾಂಡದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸಬೇಕು. ಅವಧಿಯ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನ್ಯಾಯಬೆಲೆ ಅಂಗಡಿ ಮಂಜೂರು ಮಾಡುವಾಗ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ(ನಿಯಂತ್ರಣ) ಆದೇಶ 2018 ರಲ್ಲಿ ಆದ್ಯತೆಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top