ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ. ಮೇ.15ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:27, ಪಿ.ಬಿ ರಸ್ತೆ ದಾವಣಗೆರೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08192-234849 ನ್ನು ಸಂಪರ್ಕಿಸಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.