ದಾವಣಗೆರೆ: 2021-22ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ, “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕವಿನಾಯಿತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಏ.30 ಕ್ಕೆ ನಿಗಧಿಪಡಿಸಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲು ಮನವಿಯನ್ನು ಮಾಡಿಕೊಂಡಿರುತ್ತಾರೆ. ಆದ್ದರಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮೇ.31 ರವರೆಗೆ ವಿಸ್ತರಿಸಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬಹುದು.
ವೆಬ್‍ಸೈಟ್ ವಿಳಾಸ: www.ssp.postmatric.karnataka.gov.in/2122 ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‍ಸೈಟ್ ವಿಳಾಸ : www.bcwd.karnataka.gov.in/ ದೂ.ಸಂಖ್ಯೆ: 8050770005/8050770004 ಇಮೇಲ್: bcwd.scholarship@karnataka.gov.in ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇಮೇಲ್ : postmatrichelp@karnataka.gov.in ದೂ.ಸಂ: 080-35254757 ಯನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .



