Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಗಿ ಖರೀದಿಯಲ್ಲಿ ದಲ್ಲಾಳಿ, ಮಧ್ಯವರ್ತಿ, ವ್ಯಾಪರಸ್ಥರನ್ನು ದೂರವಿಡಿ: ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್

ದಾವಣಗೆರೆ

ದಾವಣಗೆರೆ: ರಾಗಿ ಖರೀದಿಯಲ್ಲಿ ದಲ್ಲಾಳಿ, ಮಧ್ಯವರ್ತಿ, ವ್ಯಾಪರಸ್ಥರನ್ನು ದೂರವಿಡಿ: ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್

ದಾವಣಗೆರೆ: ಬೆಂಬಲ ಬೆಲೆಯಲ್ಲಿ ಸರ್ಕಾರದಿಂದ ರಾಗಿ ಖರೀದಿಸುತ್ತಿದ್ದು ನೈಜ ರೈತರಿಂದ ರಾಗಿ ಖರೀದಿಸಿ ದಲ್ಲಾಳಿಗಳು, ಮಧ್ಯವರ್ತಿಗಳು, ವ್ಯಾಪರಸ್ಥರನ್ನು ದೂರವಿಡಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾ ಶಂಕರ್ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಕೊವೀಡ್ ಪರಿಸ್ಥಿತಿ ಪರಿಶೀಲನೆ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರೂಟ್ಸ್ ತಂತ್ರಾಂಶದಲ್ಲಿ ಎಲ್ಲ ರೈತರು ನೋಂದಣಿ ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಮೂಡಿಸಿ, ಈ ಬಗ್ಗೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರುಗಳು ವಿಶೇಷ ಡ್ರೈವ್ ಮಾಡುವ ಮೂಲಕ ರೈತರಿಗೆ ಇದರಿಂದ ದೊರೆಯುವ ಸೌಲಭ್ಯಗಳ ಬಗೆಗೆ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ರೈತರಿಗೆ ಗೊಬ್ಬರ, ಬೀಜ, ಇನ್‍ಪುಟ್ ಸಬ್ಸಿಡಿ, ಮಾಹಿತಿ ಎಲ್ಲವೂ ಪ್ರೂಟ್ಸ್ ತಂತ್ರಾಂಶದ ಮೂಲಕವೇ ರೈತರಿಗೆ ಸಿಗಲಿವೆ. ಹಾಗಾಗಿ ಪ್ರೂಟ್ ತಂತ್ರಾಂಶದ ಬಗೆಗೆ ಉಪವಿಭಾಗಾಧಿಕಾರಿಗಳು ಗಮನಹರಿಸಿ ಮತ್ತು ಕುಡಿಯುವ ನೀರಿನ ಬಗೆಗೆ ಒಂದು ವಾರದೊಳಗೆ ಸರ್ವೆ ಮಾಡಿ ಮಾಹಿತಿ ನೀಡಲು ಉಸ್ತುವಾರಿ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಕುಡಿಯವ ನೀರಿನ ಸಮಸ್ಯೆ ಇಲ್ಲ, ಯಾವುದೇ ಖಾಸಗಿ ಬೋರ್‍ವೆಲ್‍ಗಳನ್ನು ತೆಗೆದುಕೊಂಡಿರುವುದಿಲ್ಲ, ಒಂದುವೇಳೆ ಮಳೆ ತಡವಾದರೆ ಸಮಸ್ಯಾತ್ಮಕ ಹಳ್ಳಿಗಳ ಪಟ್ಟಿಯನ್ನು ಜಿ.ಪಂ ಸಿಇಒ ಸಿದ್ದಪಡಿಸಿಕೊಂಡಿದ್ದು ಅದರಂತೆ ಸಮಸ್ಯೆ ನಿವಾರಿಸಲಾಗುವುದು ಎಂದರು. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕೊವೀಡ್ ಪರೀಕ್ಷೆಗಳನ್ನು ನಡೆಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಕೊವೀಡ್ ಮರಣ ಪರಿಹಾರ ಪ್ರಕರಣಗಳಲ್ಲಿ ನಿಯಮದಂತೆ ಪರಿಹಾರವನ್ನು ನೀಡಲಾಗುತ್ತಿದೆ. ಮಳೆಹಾನಿಗೆ ಸಂಬಂಧಿಸಿದಂತೆ ಜಗಳೂರಿನಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಚನ್ನಗಿರಿ ತಾಲ್ಲೂಕಿನಲ್ಲಿ 35 ಕುರಿಗಳು ಸಾವನ್ನಪ್ಪಿವೆ ಈ ಸಂಬಂಧ ಪರಿಹಾರ ನೀಡಲಾಗುತ್ತಿದೆ ಹಾಗೂ 35 ವಾರಗಳಿಗಾಗುವಷ್ಟು ಮೇವು ಲಭ್ಯವಿದ್ದು ಯಾವುದೇ ಮೇವಿನ ಸಮಸ್ಯೆ ಇಲ್ಲ ಎಂದರು.

ಸಭೆಗೆ ಮಾಹಿತಿ ನೀಡಿದ ಆಹಾರ ಇಲಾಖೆಯ ಜಂಟಿ ಕಾರ್ಯದರ್ಶಿ ಮಂಟೆಸ್ವಾಮಿ ಜಿಲ್ಲೆಯಲ್ಲಿ ಈಗಾಗಲೇ 2862 ರೈತರ 52591 ಕ್ವಿಂಟಾಲ್ ರಾಗಿಗೆ ನೋಂದಣಿಯಾಗಿದೆ ಹಾಗೂ 12900 ಪಡಿತರ ಚೀಟಿಗೆ ಅರ್ಜಿಗಳು ಬಂದಿದ್ದು 4000 ಕಾರ್ಡುಗಳನ್ನು ವಿತರಿಸಲಾಗಿದೆ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಕೊವೀಡ್ ಶೂನ್ಯ ಪ್ರಕರಣಗಳಿದ್ದು ದಿನ ನಿತ್ಯ 60-70 ಕೊವೀಡ್ ಪರೀಕ್ಷೆ ಮಾಡಲಾಗುತ್ತಿದೆ, ಹಾಗೂ ಲಕ್ಷಣಗಳಿರುವ ಪ್ರತಿಯೊಬ್ಬರಲ್ಲೂ ಐಎಲ್‍ಐ ಹಾಗೂ ಸಾರಿ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಒಟ್ಟಾರೆ ಮೂರನೇ ಅಲೆಯಲ್ಲಿ 1.70 ಲಕ್ಷ ಪರೀಕ್ಷೆಗಳನ್ನು ಮಾಡಲಾಗಿದ್ದು, ಅವುಗಳಲ್ಲಿ 6344 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, 15 ಮರಣ ಸಂಭವಿಸಿರುತ್ತವೆ ಎಂದರು.

ನಗರಾಭಿವೃದ್ದಿಕೋಶದ ಯೋಜನಾಧಿಕಾರಿ ನಜ್ಮಾ ಮಾಹಿತಿ ನೀಡಿ, ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ 14 ನೇ ಹಣಕಾಸು ಯೋಜನೆಯಲ್ಲಿ ಶೇ.95.27 ರಷ್ಟು ಸಾಧನೆಯಾಗಿದ್ದು, 15ನೇ ಹಣಕಾಸು ಯೋಜನೆಯಲ್ಲಿ ಶೇ.60.57 ರಷ್ಟು ಪ್ರಗತಿಯಾಗಿದೆ ಎಂದರು. ಸಭೆಯಲ್ಲಿ ಜಿ.ಪಂ ಸಿಇಒ ಡಾ.ಎ.ಚನ್ನಪ್ಪ, ಅಪರ ಜಿಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಉಪವಿಭಾಗಾಧಿಕಾರಿಗಳಾದ ಮಮತ ಹೊಸಗೌಡರ್ ಹಾಗೂ ತಿಮ್ಮಣ್ಣ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ.ಮುದ್ದಜ್ಜಿ, ಸ್ಮಾರ್ಟ್ ಸಿಟಿಯ ರವೀಂದ್ರ ಮಲ್ಲಾಪುರ, ಡಿಹೆಚ್‍ಓ ನಾಗರಾಜ್, ಡಾ.ಮುರಳೀಧರ್, ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top