Connect with us

Dvgsuddi Kannada | online news portal | Kannada news online

ದಾವಣಗೆರೆ: ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ದಾವಣಗೆರೆ

ದಾವಣಗೆರೆ: ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ದಾವಣಗೆರೆ: ಮಹನೀಯರ ಜಯಂತಿಗಳು ಕೇವಲ ಆಚರಣೆಯಾಗದೆ, ಅನುಸರಣೆ ಆಗಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಅವರು ಮಾತನಾಡಿದರು.

ಭಗೀರಥ ಮಹರ್ಷಿರವರ ಜಯಂತಿಯು ಬರಿ ಆಚರಣೆಯಾಗಬಾರದು ಬದಲಿಗೆ ಅನುಸರಣೆ ಆಗಬೇಕು. ಭಗಿರಥ ಮಹರ್ಷಿ ಅಂತಹ ಮಹನೀಯರ ಯಶೋಗಾಥೆಯನ್ನು ನಮ್ಮ ಮಕ್ಕಳಿಗೂ ತಿಳಿಸಬೇಕು. ನಾವೆಲ್ಲರೂ ಅವರ ಮಾರ್ಗದಲ್ಲಿ ಸಾಗಿ ಸಮಾಜದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡೋಣ ಎಂದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅನಂದ್ ಮಾತನಾಡಿ, ಇವತ್ತಿನ ದಿನ ನಾವು ನೀರನ್ನು ಹಣಕೊಟ್ಟು ಕುಡಿಯುವಂತಹ ಪರಿಸ್ಥಿತಿಗೆ ಬಂದಿದೆ, ನಾವೆಲ್ಲರೂ ಭಗೀರಥ ಮಹಾಋಷಿ ಅವರಂತೆ ನಮ್ಮ ಮುಂದಿನ ಪೀಳಿಗೆಗೋಸ್ಕರ ನೀರನ್ನು ಉಳಿಸುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಸಮಾಜದ ಜಿಲ್ಲಾಧ್ಯಕ್ಷ ತಿಪ್ಪೇಶ್ ಮಾತನಾಡಿ, ಇಡೀ ಮನುಕುಲಕ್ಕೆ ಮಹಾನೀಯ ಭಗೀರಥ ರವರ ಕೊಡುಗೆ ಅಪಾರವಾದದ್ದು, ನಾವೆಲ್ಲರೂ ಆಧುನಿಕ ಭಗೀರಥ ಆಗಬೇಕು. ಎಲ್ಲಿ ನೀರು ವ್ಯರ್ಥವಾಗಿ ಪೋಲಾಗಿರುತ್ತದೆಯೋ ಅದನ್ನು ತಡೆಯುವ ನಿಟ್ಟಿನಲ್ಲಿ ಜಲ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ಸಮಾಜದ ಮುಖಂಡ ಅಂಜಿನಪ್ಪ ಉಪನ್ಯಾಸ ನೀಡಿ, ಗಂಗೆಯನ್ನು ಭೂಮಿಗೆ ಇಳಿಸಿದ ಮಹಾನಿಯ ಶ್ರೀ ಭಗೀರಥ ಮಹರ್ಷಿ, ಗಂಗೆ ಕೇವಲ ನೀರಲ್ಲ, ಅದು ಪ್ರಜ್ಞೆಯ ಪ್ರವಾಹ. ಭಗೀರಥ ಮಹರ್ಷಿಯವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲದೆ ಕರ್ಮ ತತ್ವದ ಮೂಲಕ ಇಡೀ ಮನುಕುಲದ ಸಕಲ ಜೀವರಾಶಿಗಳಿಗೂ ಅನುಕೂಲ ಮಾಡಿಕೊಟ್ಟ ಮಹಾಪುರುಷರಾಗಿದ್ದಾರೆ. ನಾವೆಲ್ಲರೂ ನಮ್ಮ ನಮ್ಮ ಕ್ಷೇತ್ರದಲ್ಲಿ ಭಗೀರಥರಂತೆ ಆಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಬಸವರಾಜಪ್ಪ ಹಾಗೂ ಭರತ್ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ರುದ್ರೇಶ್ ಚಿರಡೋಣಿ ಹಾಗೂ ಸಂಗಡಿಗರಿಂದ ಶ್ರೀ ಭಗೀರಥ ಮಹರ್ಷಿ ಅವರ ಹಾಡನ್ನು ಹಾಡಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಉಪ್ಪಾರ ಸಮಾಜದ ಮಾಜಿ ಉಪಮೇಯರ್ ಮಂಜುಳಾ, ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಚಂದ್ರಪ್ಪ, ದಾವಣಗೆರೆ ಶಿಕ್ಷಣತಜ್ಞ ಬಸವರಾಜ್ ಸಾಗರ್, ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top