Connect with us

Dvgsuddi Kannada | online news portal | Kannada news online

ದಾವಣಗೆರೆ: ಬೀದಿ ನಾಯಿ ತಡೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ

ದಾವಣಗೆರೆ

ದಾವಣಗೆರೆ: ಬೀದಿ ನಾಯಿ ತಡೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ

ದಾವಣಗೆರೆ: ಹಳೇ ದಾವಣಗೆರೆ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳ ಮೇಲೆ ದಾಳಿ ಮಾಡುವ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚಿಸಿದರು.

ಸಭೆಯಲ್ಲಿ ಹಾಜರಿದ್ದ ಮಹಾನಗರ ಪಾಲಿಕೆ ಆರೋಗ್ಯ ಇಲಾಖೆ ಅಧಿಕಾರಿ ಮಾಹಿತಿ ನೀಡಿ, ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದು ಸಂತಾನಹರಣ(ಎಬಿಸಿ) ಪ್ರಕ್ರಿಯೆಯನ್ನು ಶುರು ಮಾಡಲಾಗಿದೆ ಎಂದರು. ಈ ವೇಳೆ ಪ್ರಸಕ್ತ ವರ್ಷ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಜಾನುವಾರುಗಳ ಆರೋಗ್ಯ ರಕ್ಷಣೆ ಹಾಗೂ ಹಾಲಿನ ಇಳುವರಿ ಕಾಪಾಡಲು ಹಾಗೂ ಮಾರಣಾಂತಿಕ ರೋಗ ರೇಬಿಸ್ ಕುರಿತು ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮಾಹಿತಿ ಒಳಗೊಂಡ ಕರ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಚಂದ್ರಶೇಖರ್ ಸುಂಕದ್, ಪಾಲಿ ಕ್ಲಿನಿಕ್ ಉಪ ನಿರ್ದೇಶಕರಾದ ವೀರೇಶ್, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾದ ರಾಘವೇಂದ್ರ, ತಾಲ್ಲೂಕು ಪಂಚಾಯಿತಿ ಇಒ ಆನಂದ್, ರೈಲ್ವೆ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ನಿರ್ಮಿತಿ ಕೇಂದ್ರದ ರವಿ, ಡಾ.ರಾಮ್ ಪ್ರಸಾದ್ ಕುಲಕರ್ಣಿ, ಡಾ.ಜಗದೀಶ್, ಡಾ.ಶಂಕರಪ್ಪ, ಡಾ.ರವಿಚಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top