ದಾವಣಗೆರೆ: ಮಹಾನಗರ ಪಾಲಿಕೆ ವಾರ್ಡ್ ನಂ.27 ಮತ್ತು 38 ರ ಉಪ ಚುನಾವಣೆ ಹಾಗೂ ಚನ್ನಗಿರಿ ಪುರಸಭೆಯ ವಾರ್ಡ್ ನಂ.16 ರ ಉಪಚುನಾವಣೆ, ದಾವಣಗೆರೆ ತಾಲ್ಲೂಕಿನ ಕಾಡಜ್ಜಿ, ಕುಕ್ಕವಾಡ, ಚನ್ನಗಿರಿ ತಾಲ್ಲೂಕಿನ ಹೊಸಕೆರೆ(ಬಸವಾಪಟ್ಟಣ) ಗ್ರಾಮ ಪಂಚಾಯಿತಿಗಳ ವಿವಿಧ ಕ್ಷೇತ್ರಗಳಿಗೆ ಉಪ ಚುನಾವಣೆ-2022 ರ ಮೇ 20 ರಂದು ನಡೆಯುವ ಮತದಾನಕ್ಕೆ ಸಿಬ್ಬಂದಿಗಳು, ಕಾರ್ಮಿಕರಿಗೆ ರಜೆಯನ್ನು ನೀಡಲಾಗಿದೆ.
ಮೇ 20 ರಂದು ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ Establishment ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ವೇತನ ಸಹಿತ ರೆಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಇಲಾಖೆಯ ಮುಖ್ಯಸ್ಥರು ವ್ಯವಸ್ಥೆ ಮಾಡತಕ್ಕದ್ದು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳ ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ತಿಳಿಸಿದ್ದಾರೆ.



