ದಾವಣಗೆರೆ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ದಾವಣಗೆರೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಸೋಮವಾರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಾಗೃತಿ ಜಾಥಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಮಹಾನಗರ ಪಾಲಿಕೆಯ ಮೇಯರ್ ಜಯಮ್ಮ ಗೋಪಿನಾಯ್ಕ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
“ಡೆಂಗೀ ತಡೆಗಟ್ಟಬಹುದು, ಬನ್ನಿ ಎಲ್ಲರೂ ಕೈ ಜೋಡಿಸೋಣ” ಎಂಬ ಪ್ರಸಕ್ತ ವರ್ಷದ ಘೋಷಣೆಯಂತೆ ಡೆಂಗ್ಯೂ ನಿಯಂತ್ರಣ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಘೋಷಣೆಗಳನ್ನು ಕೂಗುತ್ತಾ ಜಾಥವು ಚಿಗಟೇರಿ ಜಿಲ್ಲಾ ಆಸ್ಪತ್ರೆಯಿಂದ ರಾಮ್ ಅಂಡ್ ಕೋ ಸರ್ಕಲ್ ಮಾರ್ಗವಾಗಿ ಚರ್ಚ್ ರಸ್ತೆಯ ದಾವಣಗೆರೆ ಒನ್ ಕೆಂದ್ರದವರೆಗೆ ಕಾಲ್ನಡಿಗೆ ಮೂಲಕ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಮಲೇರಿಯಾಧಿಕಾರಿ ಡಾ. ಕೆ. ನಟರಾಜ್, ತಹಶೀಲ್ದಾರ್ ಬಸವನಗೌಡ ಕೊಟ್ಟೂರು ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಕಾಲೇಜು ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇತರರು ಭಾಗವಹಿಸಿದ್ದರು.



