Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಕಲಚೇತನ ಹಾಗೂ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ಸೌಲಭ್ಯಗಳ ವಿತರಿಸಿದ ಶಾಸಕ ಎಸ್.ಎ.ರವೀಂದ್ರನಾಥ್

ಪ್ರಮುಖ ಸುದ್ದಿ

ದಾವಣಗೆರೆ: ವಿಕಲಚೇತನ ಹಾಗೂ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ಸೌಲಭ್ಯಗಳ ವಿತರಿಸಿದ ಶಾಸಕ ಎಸ್.ಎ.ರವೀಂದ್ರನಾಥ್

ದಾವಣಗೆರೆ: ಸರ್ಕಾರ ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತದ್ದು, ಅರ್ಹರು ಆ ಯೋಜನೆಗಳ ಸೌಲಭ್ಯಗಳನ್ನು ಪಡೆದು ಸದುಪಯೋಗಪಡಿಸಿಕೊಳ್ಳಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ದಾವಣಗೆರೆ ಉತ್ತರ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಅಮೃತ ಸ್ವ-ಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳಿಗೆ ಚೆಕ್ ವಿತರಣಾ ಕಾರ್ಯಕ್ರಮ ಹಾಗೂ ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಕಲಚೇತನರಿಗೆ ಸಹಾಯವಾಗಲಿ ಎನ್ನುವ ದೃಷ್ಟಿಯಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಉಚಿತವಾಗಿ ದ್ವಿಚಕ್ರ ವಾಹನಗಳನ್ನು ನೀಡಲಾಗಿದೆ. ಫಲಾನುಭವಿಗಳು ವಾಹನವನ್ನು ಸರಿಯಾದ ಉದ್ದೇಶಕ್ಕೆ ಬಳಸಿಕೊಳ್ಳಬೇಕು, ಏಕೆಂದರೆ ಹಳ್ಳಿಗಳಲ್ಲಿ ವಿಕಲಚೇತನರಿಗೆ ನೀಡಲಾದ ವಾಹನಗಳನ್ನು ಅನ್ಯ ಕಾರ್ಯಗಳಿಗೆ ಬಳಸುವುದು ಹೆಚ್ಚುತ್ತಿದೆ. ಆದ್ದರಿಂದ ಸರ್ಕಾರದ ಯೋಜನೆಗಳು ದುರುಪಯೋಗ ಆಗದೇ, ಸದುಪಯೋಗ ಆಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ “6 ತಿಂಗಳಿನಿಂದ 3 ವರ್ಷ ಸಾಧಾರಣ ಅಪೌಷ್ಠಿಕ ಮಕ್ಕಳಿಗೆ ವಾರದಲ್ಲಿ 3 ದಿನ ಮೊಟ್ಟೆ ಹಾಗೂ 3 ದಿನ 200 ಮಿ.ಲೀ ಹಾಲು ಮತ್ತು 3 ವರ್ಷದಿಂದ 6 ವರ್ಷದವರೆಗಿನ ಸಾಧಾರಣ ಅಪೌಷ್ಠಿಕ ಮಕ್ಕಳಿಗೆ ವಾರದಲ್ಲಿ 5 ದಿನ ಮೊಟ್ಟೆ ಹಾಗೂ 3 ದಿನ 200 ಮಿ.ಲೀ. ಹಾಲು ವಿತರಣಾ ಕಾರ್ಯಕ್ರಮಕ್ಕೆ ಶಾಸಕರಾದ ಎಸ್.ಎ ರವೀಂದ್ರನಾಥ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ 2021-22 ನೇ ಸಾಲಿನ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಹಯೋಗದಲ್ಲಿ ಒಟ್ಟು 18 ಜನ ವಿಕಲಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಮೃತ ಸ್ವ-ಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳಿಗೆ ಚೆಕ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯ ವಿರೇಶ್ ಪೈಲ್ವಾನ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಪ್ರಕಾಶ್ ಕೆ.ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿಜಯ್‍ಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top