ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡಲಾಗುತ್ತಿದೆ.
ದಾವಣಗೆರೆ ಜಿಲ್ಲೆಯ ಪ್ರತೀ ತಾಲ್ಲೂಕಿನ ಅರ್ಹವಿರುವ ಪರಿಶಿಷ್ಟ ಜಾತಿಯ 2 ಸಂಘ ಸಂಸ್ಥೆಗಳಿಗೆ ಮತ್ತು ಪರಿಶಿಷ್ಟ ಪಂಗಡದ 01 ಸಂಘ ಸಂಸ್ಥೆಗಳಿಗೆ ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡಲು ಪ್ರಸ್ತಾವನೆ ಆಹ್ವಾನಿಸಲಾಗಿದೆ. 15 ರಿಂದ 35 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳು ತಮ್ಮ ಪ್ರಸ್ತಾವನೆಯನ್ನು ಸೆ.24 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ, ದೂರವಾಣಿ ಸಂಖ್ಯೆ 08192-237480 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



