ದಾವಣಗೆರೆ: ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಮೇ 20 ರಂದು ದೇವರಾಜ ಅರಸು ಬಡಾವಣೆಯ ಅಂಧ ಮಕ್ಕಳ ಸರ್ಕಾರಿ ಶಾಲೆಯಲ್ಲಿ ಯುವ ಅಂಗವಿಕಲರಿಗೆ ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮರ್ಥಂ ಅಂಗವಿಕಲರ ಸಂಸ್ಥೆಯ ಟ್ರಸ್ಟಿ ವಾಸಂತಿ ಸವಣೂರು, ಎಸ್ ಎಸ್ ಎಲ್ ಸಿ, ಪಿಯುಸಿ, ಡಿಪ್ಲೊಮಾ, ಯಾವುದೇ ಪದವಿ ಪಡೆದ 18ರಿಂದ 35 ವರ್ಷದೊಳಗಿನ ಅಂಗವಿಕಲರು ಮೇಳದಲ್ಲಿ ಭಾಗವಹಿಸಬಹುದು. ಸಂಸ್ಥೆಯು ಬೆಳ್ಳಿ ಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಯುವ ಅಂಗವಿಕರಿಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಅಂಗವಿಕರಿಗೆ ಶಿಕ್ಷಣ ಮತ್ತು ಕೌಶಲ್ಯ ತರಬೇತಿ ನೀಡುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ. ಹೀಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಇದರ ಸದುಪಯೋಗವನ್ನು ವಿಕಲಚೇತನರು ಪಡೆದುಕೊಳ್ಳಬೇಕು ಎಂದು ತಿಳಿಸಿದದರು.
ಮೇಳದಲ್ಲಿ 15ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಯೊಂದಿಗೆ ಹಾಜರಾಗಬೇಕಿದೆ. 3 ಪಾಸ್ ಪೋರ್ಟ್ ಸೈಜ್ ಫೋಟೋ, ಶೈಕ್ಷಣಿಕ ದಾಖಲಾತಿ ನಕಲು ಜತೆಗೆ ಅಂಗವಿಕಲರ ಪ್ರಮಾಣ ಪತ್ರ, ಆಧಾರ ಕಾರ್ಡ್ ನೊಂದಿಗೆ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗೆ 6364867818, 6964867795, 9449864693 ಸಂಪರ್ಕಿಸಿ.