Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ

ದಾವಣಗೆರೆ

ದಾವಣಗೆರೆ: ಇಂದು ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ 2021-22ನೇ ಸಾಲಿನಲ್ಲಿ ಆಯ್ಕೆಯಾದ 05 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ(ರೆಟ್ರೋಫಿಟ್ಮೆಂಟ್ ಸಹಿತ)ಗಳನ್ನು ವಿತರಿಸಲಾಗುವುದು. ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೊ. ಎನ್.ಲಿಂಗಣ್ಣ ಅವರು ಇಂದು (ಮೇ.19 ) ಬೆ.11 ಗಂಟೆಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ ದೇವರಾಜ್ ಅರಸ್ ಬಡಾವಣೆ ಬಿ.ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ ಶಾಲಾ ಆವರಣದಲ್ಲಿ ವಿತರಿಸುವರು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ ಪ್ರಕಾಶ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top