ದಾವಣಗೆರೆ: ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಯುವಕರನ್ನು ಬೆಂಬಲಿಸಿ, ಗೆಲ್ಲಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ ಕೆ.ಎಲ್.ಹರೀಶ್ ಬಸಾಪುರ ಹೇಳಿದ್ದಾರೆ.
ಪಂಚಾಯತಿಯ ಪ್ರತಿಯೊಂದು ವಾರ್ಡಿಗೆ ಒಬ್ಬರಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಗಳನ್ನು ಬೆಂಬಲಿಸುವ ಮೂಲಕ ಯುವಕರನ್ನು ಇನ್ನೂ ಹೆಚ್ಚು ಹೆಚ್ಚು ಪಕ್ಷ ಸಂಘಟನೆಗೆ ಹುಮ್ಮಸ್ಸು ಬರುವ ರೀತಿ ನೋಡಿಕೊಳ್ಳಬೇಕು. ಹಿರಿಯ ನಾಯಕರುಗಳು ಯುವಕರಿಗೆ ಮಾರ್ಗದರ್ಶನ ನೀಡುವ ಮೂಲಕ ಮುಂದಿನ ದಿನಗಳಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಉತ್ತೇಜಿಸಬೇಕು. ಇದರಿಂದ ಮುಂದಿನ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಯುವಕರು ಇನ್ನೂ ಹೆಚ್ಚು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಪಕ್ಷದ ಕಡೆ ಸೆಳೆಯಲು ಸಹಾಯವಾಗುತ್ತದೆ ಎಂದು ಪಕ್ಷದ ನಾಯಕರುಗಳಲ್ಲಿ ಮನವಿ ಮಾಡಿದ್ದಾರೆ.



