Connect with us

Dvgsuddi Kannada | online news portal | Kannada news online

ದಾವಣಗೆರೆ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷದಂತೆ 2021 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.

ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2021 ರ ಜನವರಿ 1 ರಿಂದ 2021 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಯಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2021 ಎಂದು ಮುದ್ರಿತವಾಗಿರಬೇಕು. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಕಾವ್ಯ, ನವಕವಿಗಳ ಪ್ರಥಮ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರÀಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣ ಬರಹ, ಅನುವಾದ-1, ಅನುವಾದ-2, ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲಿಷಿಗೆ ಅನುವಾದ, ದಾಸ ಸಾಹಿತ್ಯ ಮತ್ತು ಸಂಕೀರ್ಣ ಈ ಪ್ರಕಾರಗಳ ಪುಸ್ತಕಗಳ ತಲಾ 04 ಪ್ರತಿಗಳನ್ನು ಸಲ್ಲಿಸಬೇಕು.

ಮರುಮುದ್ರಣವಾದ, ಪಿಹೆಚ್‍ಡಿ ಪದವಿಗೆ ಸಿದ್ದಪಡಿಸಿದ, ಪಠ್ಯಪುಸ್ತಕಗಳು, ಅಕಾಡೆಮಿಯ ಗೌರವ ಪ್ರಶಸ್ತಿ ಪುರಸ್ಕøತ ಸಾಹಿತಿಗಳ ಕೃತಿಗಳು, ಅಕಾಡೆಮಿಯಿಂದ ಈಗಾಗಲೇ ಮೂರು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಒಂದು ಪ್ರಕಾರದಲ್ಲಿ ಒಂದು ಬಾರಿ ಪುಸ್ತಕ ಬಹುಮಾನ ಪಡೆದವರ ಕೃತಿಗಳನ್ನು ಮತ್ತದೇ ಪ್ರಕಾರದಲ್ಲಿ ಮುಂದಿನ ಮೂರು ವರ್ಷಗಳವರೆಗೆ ಪರಿಗಣಿಸುವುದಿಲ್ಲ. ಒಬ್ಬ ಲೇಖಕರಿಗೆ ಮೂರು ಬಾರಿ ಬೇರೆ ಬೇರೆ ಪ್ರಕಾರಗಳಲ್ಲಿ ಬಹುಮಾನ ಪಡೆಯುವ ಅವಕಾಶವಿದೆ.

ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ರಿಜಿಸ್ಟರ್ಡ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜೂನ್ 15 ರೊಳಗೆ ತಲುಪಿಸಬೇಕೆಂದು ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top